ಭಾಲ್ಕಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸೇವೆ ಅನನ್ಯ. ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಶಿವು ಲೋಖಂಡೆ ಹೇಳಿದರು.
ಪಟ್ಟಣದ ಶ್ರೀರಾಮ ಮಂದಿರ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಡಜನರು, ನಿರ್ಗತಿಕರು, ದುರ್ಬಲ ವರ್ಗದವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನೆರವು ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿರುವುದು ಹೆಮ್ಮೆ ತರಿಸಿದೆ ಎಂದರು.
ಪ್ರಮುಖರಾದ ನಾಗರಾಜ, ಬ್ಯಾಂಕ್ ಆಫ್ ಬರೋಡಾದ ಪ್ರಬಂಧಕ ಅಮರ, ಜಿಲ್ಲಾ ಜನಜಾಗೃತಿ ವೇದಿಕೆಯ ಮಾಧ್ಯಮ ಸಲಹೆಗಾರ ಸಂತೋಷ ಬಿ.ಜಿ.ಪಾಟೀಲ, ಸಂಸ್ಥೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ, ಯೋಜನಾಧಿಕಾರಿ ಸಂತೋಷ, ಶಿವಾನಂದ, ಸುರೇಶ ಹಾಜರಿದ್ದರು.