ಶನಿವಾರ, ಮಾರ್ಚ್ 6, 2021

ಪ್ರತಿ ತಾಲ್ಲೂಕಿಗೊಂದು ಗೋಶಾಲೆ: ಪಶು ಸಂಗೋಪನಾ ಸಚಿವ ಪ್ರಭು ಚವಾಣ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಜನರಿಗೆ ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ಸರ್ಕಾರ ಪ್ರತಿ ತಾಲ್ಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಿದೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಹೇಳಿದರು.

ಇಲ್ಲಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಗೋಶಾಲೆ ವಾರ್ಷಿಕೋತ್ಸವ ಹಾಗೂ ‘ಗೋ ರಥ ಗೋ ಸೇವೆ’ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ,‘ಚಾಲ್ತಿಯಲ್ಲಿರುವ ಗೋಶಾಲೆಗಳಿಗೂ ಸರ್ಕಾರದಿಂದ ನೆರವು ಕಲ್ಪಿಸಲು ಪ್ರಯತ್ನಿಸಲಾಗುವುದು’ ಎಂದರು.

‘ಬಹುತೇಕ ಎಲ್ಲ ಗ್ರಾಮಗಳಲ್ಲಿ ಗೋಮಾಳ ಇದೆ. ಅದೇ ಸ್ಥಳದಲ್ಲಿ ಸರ್ಕಾರದಿಂದ ಗೋಶಾಲೆ ನಿರ್ಮಿಸಲಾಗುವುದು. ಯಾವಾಗ ಶುರು ಮಾಡಬೇಕು ಎನ್ನುವ ಕುರಿತು ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು