ಭಾಲ್ಕಿ: ‘ಗಡಿಭಾಗದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ತಾಲ್ಲೂಕಿನ ಬಾಜೋಳಗಾ ಕ್ರಾಸ್ ಹತ್ತಿರದ ರಾಹುಲ್ ಶಿಕ್ಷಣ ಸಂಸ್ಥೆಯ ಬುದ್ಧಪ್ರಿಯಾ ಪ್ರೌಢಶಾಲೆ ಮದಕಟ್ಟಿಯಲ್ಲಿ ಆಯೋಜಿಸಿದ್ದ ನೂತನ ವರ್ಗಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾಕಷ್ಟು ಅನುದಾನ ನೀಡಿ, ಗಡಿ ಭಾಗದ ಶಾಲಾ, ಕಾಲೇಜುಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮದಕಟ್ಟಿಯ ಬುದ್ಧಪ್ರಿಯಾ ಪ್ರೌಢಶಾಲೆಯ ನೂತನ ವರ್ಗಕೋಣೆಗಳ ಕಟ್ಟಡಕ್ಕೆ ಅನುದಾನ ನೀಡಿ, ಇಲ್ಲಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ’ ಎಂದು ಹೇಳಿದರು.

ವೈಶಾಲಿ ನಗರ ಆಣದೂರಿನ ಭಂತೆ ಧಮ್ಮಾನಂದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ರಾಹುಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ತಿಪ್ಪಣ್ಣ ಶಿವಪೂರೆ, ಪ್ರಾಚಾರ್ಯ ಮಲ್ಲಿಕಾರ್ಜುನ ಕಾಂಬಳೆ, ಕಸಾಪ ತಾಲ್ಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ಮುಖ್ಯಶಿಕ್ಷಕ ಸಂಜೀವಕುಮಾರ ಬಿರಾದಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಪಾರ್ವತಿ ಲಿಂಗರಾಜ ಖಂಡಾಳೆ, ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರೆ, ಬಿಇಒ ಸಿ.ಜಿ.ಹಳ್ಳದ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಕಾರ್ಯದರ್ಶಿ ರಾಜಪ್ಪ ಪಾಟೀಲ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ, ಅಕ್ಷರ ದಾಸೋಹ ಯೋಜನೆಯ ಮಲ್ಲಿನಾಥ ಸಜ್ಜನ್, ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಉಪಸ್ಥಿತರಿದ್ದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಯಿತು. ನಿವೃತ್ತ ಮುಖ್ಯಶಿಕ್ಷಕ ಶ್ರೀಕಾಂತ ಮೂಲಗೆ ಸ್ವಾಗತಿಸಿದರು. ದೀಪಕ ಥಮಕೆ ನಿರೂಪಿಸಿದರು. ಜೈದೀಪ ಶೇರಿಕಾರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.