ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರ ದಿನಾಚರಣೆ

ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ
Last Updated 20 ಏಪ್ರಿಲ್ 2022, 13:40 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾ ಆಡಳಿತ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಏ.21 ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2020-21 ಮತ್ತು 2021-22ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.


ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸುವರು. ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮತ್ತು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಘನ ಉಪಸ್ಥಿತಿ ವಹಿಸುವರು. ಶಾಸಕ ರಹೀಂಖಾನ್ ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಬಂಡೆಪ್ಪ ಕಾಶೆಂಪೂರ, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಶಶೀಲ್ ನಮೋಶಿ, ಭೀಮರಾವ್ ಪಾಟೀಲ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ. ಮುಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಪಾಲ್ಗೊಳ್ಳುವರು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರಬಾಬು ಉಪಸ್ಥಿತರಿರುವರು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ನೌಕರರ ದಿನ ಆಚರಿಸಲಾಗುತ್ತಿದೆ. ಜಿಲ್ಲಾಮಟ್ಟದ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

***

ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರು

2020-21: ಗುಡಪಳ್ಳಿ ಪಿಡಿಒ ಸಂತೋಷ ಪಾಟೀಲ, ಚಿಟಗುಪ್ಪ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಹಮ್ಮದ್ ಸಲೀಂ, ಜಿಲ್ಲಾ ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಶರಣಪ್ಪ ಖರೋನೆ, ಸರ್ಕಾರಿ ಐಟಿಐ ಕಿರಿಯ ತರಬೇತಿ ಅಧಿಕಾರಿ ಯುಸೂಫ್‍ಮಿಯ, ಬಸವಕಲ್ಯಾಣ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಾಗರ, ಔರಾದ್ ಕೃಷಿ ಸಹಾಯಕ ನಿರ್ದೇಶಕ ಅನ್ಸಾರಿ ಮಾಕ್, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ ಮೇದಾ, ಔರಾದ್ ಸರ್ಕಾರಿ ಆಸ್ಪತ್ರೆಯ ಸೇವಕ ವಿದ್ಯಾಸಾಗರ ಕೋಟೆ, ಜಲಸಂಗಿ ಗ್ರಾಮ ಲೆಕ್ಕಿಗ ಮಹಾಂತೇಶ ಎಸ್. ಚತ್ತರಕಿ, ಔರಾದ್ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ.


2021-22: ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ ಯದಲಾಪೂರೆ, ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ ರಾಜಕುಮಾರ ರೋಡೆ, ಬಸವಕಲ್ಯಾಣ ನಗರಸಭೆ ಆಯುಕ್ತ ಶಿವಕುಮಾರ, ಆರ್.ಡಿ.ಡಬ್ಲ್ಯೂ.ಎಸ್. ಮತ್ತು ಎಸ್ ಭಾಲ್ಕಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಾಣಿಕರಾವ್ ಕೆರೂರೆ, ನಾಗೂರಾ ಪಿಡಿಒ ಗಾಯತ್ರಿದೇವಿ ಹೊಸಮನಿ, ಅಕ್ಷರ ದಾಸೋಹ ಯೋಜನೆ ಜಿಲ್ಲಾ ಶಿಕ್ಷಣಾಧಿಕಾರಿ ಇನಾಯತ್ ರಹೆಮಾನ್ ಸಿಂಧೆ, ಘೋಡವಾಡಿ ಪಿಡಿಒ ರಾಜಶೇಖರ ಬುಳ್ಳಾ, ಔರಾದ್ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಬೀದರ್ ನಗರಸಭೆ ಆರೋಗ್ಯ ನಿರೀಕ್ಷಕ ನಾಗೇಶ ಸಪಾಟೆ, ಬಿಕೆಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋಪಿ ಕೃಷ್ಣ.


ನೌಕರರಿಗೆ ಒಒಡಿ ಸೌಲಭ್ಯ:

ಜಿಲ್ಲಾಮಟ್ಟದ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ನೌಕರರಿಗೆ ಜಿಲ್ಲಾ ಆಡಳಿತ ಒಒಡಿ ಸೌಲಭ್ಯ ಕಲ್ಪಿಸಿದೆ.
ತಮ್ಮ ಮನವಿಗೆ ಸ್ಪಂದಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಸರ್ಕಾರಿ ನೌಕರರಿಗೆ ಒಒಡಿ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT