ಸೋಮವಾರ, ಜನವರಿ 24, 2022
20 °C

ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ‘ರಾಜ್ಯದಲ್ಲಿ ಕ್ಲಸ್ಟರ್‌ಗಳಲ್ಲೇ ಓಮೈಕ್ರಾನ್ ಕಾಣಿಸಿಕೊಂಡಿದೆ. ಚಿಕ್ಕಮಗಳೂರಲ್ಲಿ ಎಲ್ಲ ವಿದ್ಯಾರ್ಥಿಗಳ ತಪಾಸಣೆ ಮಾಡಿ ಹಾಸ್ಟೆಲ್‌ ಶೀಲ್‌ಡೌನ್‌ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಓಮೈಕ್ರಾನ್ ಮೇಲೆ ನಿಗಾ ಇಡಲಾಗಿದೆ. ತಜ್ಞರು ಸೂಚಿಸಿದ ಮಾರ್ಗಸೂಚಿ ಅನುಷ್ಠಾನಗೊಳಿಸಲಾಗಿದೆ. ಅದರ ಪರಿಣಾಮ ಹಾಗೂ ವಿಸ್ತರಣೆ ಬಗ್ಗೆ ತಜ್ಞರ ಸಲಹೆ ಪಡೆದು ಮಾರ್ಗಸೂಚಿಯಲ್ಲಿ ಕಾಲ ಕಾಲಕ್ಕೆ ಬದಲಾವಣೆ ಮಾಡಲಾಗುವುದು. ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯಿಂದಲೂ ಸನ್ನದ್ಧವಾಗಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು