ಹುಲಸೂರ: ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಒಂದೇ ಸೂರಿನಡಿ ಎಲ್ಲ ಇಲಾಖೆಗಳು ಬರುವಂತೆ ‘ಪ್ರಜಾಸೌಧ’ ಕಟ್ಟಡ ವಿನ್ಯಾಸಗೊಳಿಸಲಾಗಿದೆ. ಹೀಗಾಗಿ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಕಾಮಗಾರಿಯನ್ನು 11 ತಿಂಗಳಿನ ಒಳಗಾಗಿ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಬೀದರ್ - ಲಾತೂರ ರಸ್ತೆಯ ಪಕ್ಕದಲ್ಲಿ 2 ಎಕರೆ ಭೂಮಿಯಲ್ಲಿ ಕಂದಾಯ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ ಪ್ರಜಾಸೌಧ ಕಟ್ಟಡ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಜನರಿಗೆ ಶುದ್ಧವಾದ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ₹ 1 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಮಟ್ಟದ ಜಲ ಸಂಗ್ರಹಗಾರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆಕೆಆರ್ಡಿಬಿ ಮತ್ತು 15ನೇ ಹಣಕಾಸು ಯೋಜನೆಯಡಿ ₹ 6.45 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗಳಿಗೆ ಚಾಲನೆ ನೀಡಲಾಗಿದೆ. ಹಂತ-ಹಂತವಾಗಿ ಇತರೆ ಇಲಾಖೆಗಳ ಕಟ್ಟಡಗಳ ನಿರ್ಮಿಸಲಾಗುವುದು. ಹಳ್ಳಿಗಳಿಂದ ಕೂಡಿದ ಹುಲಸೂರ ತಾಲ್ಲೂಕಿನ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.

‘ಕಮಲನಗರ, ಹುಲಸೂರ ಹಾಗೂ ಚಿಟ್ಟಗುಪ್ಪ ತಾಲ್ಲೂಕುಗಳಲ್ಲಿ ಆಡಳಿತ ಭವನಗಳ ಅಗತ್ಯ ಮನಗಂಡು, ಈ ಕುರಿತು ನಾನು ಸಚಿವ ಸಂಪುಟದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಕಂದಾಯ ಸಚಿವರೊಂದಿಗೆ ಚರ್ಚಿಸಿ ಈ ಮೂರು ಹೊಸ ತಾಲ್ಲೂಕುಗಳ ಆಡಳಿತ ಭವನ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ’ ಎಂದರು.

ಶಾಸಕ ಶರಣು ಸಲಗರ ಮಾತನಾಡಿ, ‘ಹುಲಸೂರ ತಾಲ್ಲೂಕು ರಚನೆಗೆ ಹೋರಾಡಿದ ಎಂ.ಜಿ. ರಾಜೊಳೆ ಅವರ ಆಶೆಯಂತೆ ಭಾಲ್ಕಿ ತಾಲ್ಲೂಕಿನ ಸಾಯಿಗಾಂವ ಜಿ.ಪಂ ಕ್ಷೇತ್ರದ 16 ಹಳ್ಳಿ ಹಾಗೂ ತಾಂಡಾ, ವಾಡಿ ಸೇರಿದಂತೆ ವಿವಿಧ ಹಳ್ಳಿಗಳು ನೂತನ ತಾಲ್ಲೂಕಿಗೆ ಸೇರ್ಪಡೆ ಮಾಡಬೇಕು, ಹುಲಸೂರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದು ಕೂಡಲೇ ರಸ್ತೆ, ಚರಂಡಿ, ಪಟ್ಟಣದ ಅತಿಕ್ರಮ ತೆರವುಗೊಳಿಸಬೇಕು. ಜಿಲ್ಲಾಧಿಕಾರಿಗಳು ತಾಲ್ಲೂಕಿನ ಮೇಲೆ ಅನ್ಯಾಯ ಮಾಡದೇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒಲವು ತೋರಬೇಕಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾರಾಣಿ ಭೋಸ್ಲೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತ ಪ್ರಕಾಶ ಕುದುರಿ, ಕಾಡಾ ಅಧ್ಯಕ್ಷ ಬಾಬು ಹೊನ್ನಾ ನಾಯಕ, ಕರ್ನಾಟಕ ಮೀನುಗಾರಿಕೆ ನಿಗಮದ ಅಧ್ಯಕ್ಷೆ ಮಾಲಾ.ಬಿ. ನಾರಾಯಣರಾವ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಸೂರ್ಯಕಾಂತ ಬಿರಾದಾರ, ಲೋಕೋಪಯೋಗಿ ಇಲಾಖೆ ಇಇ ಶಿವಶಂಕರ ಕಾಮಶೆಟ್ಟಿ , ತಹಶೀಲ್ದಾರ್ ಶಿವಾನಂದ ಮೇತ್ರೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಶಿವರಾಜ ಪಲ್ಲರಿ, ಉಪಾಧ್ಯಕ್ಷೆ ಮೀರಾಬಾಯಿ ಗಾಯಕವಾಡ, ತಾ.ಪಂ ಇಒ ಮಹಾದೇವ ಜಮ್ಮು, ಸಿಪಿಐ ಅಲಿಸಾಬ, ತಾಲ್ಲೂಕು ಹೋರಾಟ ಸಂಚಾಲಕ ಎಂ.ಜಿ. ರಾಜೊಳೆ, ಗ್ಯಾರಂಟಿ ಯೋಜನೆ ತಾಲ್ಲೂಕು ಅಧ್ಯಕ್ಷ ನೀಲಕಂಠ ರಾಠೋಡ, ಲತಾ ಹಾರಕೂಡೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ನಾಗರಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.