ಬಸವಕಲ್ಯಾಣ: 'ಜಿಲ್ಲೆಯಲ್ಲಿನ ಯಾವುದೇ ಗ್ರಾಮ ಪಂಚಾಯಿತಿಗೆ ಪ್ರಸಕ್ತ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನ ಬಂದಿಲ್ಲ' ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸರೆಡ್ಡಿ ಹಣಮಂತವಾಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪಂಚಾಯಿತಿ ಸದಸ್ಯರ ಸಂಖ್ಯೆಯ ಆಧಾರದಲ್ಲಿ ಪ್ರತಿ ಪಂಚಾಯಿತಿಗೆ ಅನುದಾನ ಬರಬೇಕು. ಹಣ ಬಾರದ ಕಾರಣದಿಂದ ಕುಡಿಯುವ ನೀರಿನ ವ್ಯವಸ್ಥೆ, ಕೊಳವೆ ಬಾವಿ ದುರಸ್ತಿ ಕಾರ್ಯ, ವಿದ್ಯುತ್ ಬಿಲ್ ಪಾವತಿ, ಗ್ರಾಮ ನೈರ್ಮಲ್ಯ ಕಾಮಗಾರಿ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿಲ್ಲ ಎಂದಿದ್ದಾರೆ.