ಬುಧವಾರ, ಸೆಪ್ಟೆಂಬರ್ 22, 2021
21 °C

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾಗೆ ಭವ್ಯ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ  ಹಾಗೂ ರಸಗೊಬ್ಬರ ಖಾತೆ  ರಾಜ್ಯ ಸಚಿವ  ಭಗವಂತ ಖೂಬಾ ಅವರಿಗೆ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸೋಮವಾರ ಭವ್ಯ ಸ್ವಾಗತ ನೀಡಿದರು.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರಿಯ ವಿಮಾನ ನಿಲ್ದಾಣದಿಂದ ಬೀದರ್‌ ಜಿಲ್ಲೆಗೆ ಬಂದ ಕೇಂದ್ರ ಸಚಿವರಿಗೆ ರಾಜ್ಯದ ಗಡಿಯಲ್ಲೇ ಅಭಿಮಾನಿಗಳು ಶಾಲು ಹೊದಿಸಿ ಹೂವಿನ ಮಾಲೆ ಹಾಕಿ, ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ನೇರವಾಗಿ ಸಿದ್ದಾರೂಢ ಮಠಕ್ಕೆ ಬಂದ ಸಚಿವರು ಶಿವಕುಮಾರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸ್ವಾಮೀಜಿ ಶಾಲು ಹೊದಿಸಿ ಶುಭ ಕೋರಿದರು. ಅಲ್ಲಿಂದ ಹೊರಟ ಸಚಿವರು ಬಸವೇಶ್ವರ ವೃತ್ತಕ್ಕೆ ಬಂದು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ತಂದನಂತರ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಸಾಗಿ ಭಗತ್‍ಸಿಂಗ್ ಪ್ರತಿಮೆ, ಡಾ.ಬಿ.ಆರ್.ಅಂಬೇಡ್ಕರ್, ಛತ್ರಪತಿ ಶಿವಾಜಿ, ಶರಣ ಹರಳಯ್ಯ ಹಾಗೂ ಮಡಿವಾಳ ಮಾಚಿದೇವ ಪುತ್ಥಳಿಗಳಿಗೆ ಮಾರ್ಲಾರ್ಪಣೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು