ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್-ನಾಂದೇಡ್ ರೈಲು ಮಾರ್ಗಕ್ಕೆ ಅನುದಾನ

Last Updated 4 ಫೆಬ್ರುವರಿ 2022, 14:51 IST
ಅಕ್ಷರ ಗಾತ್ರ

ಬೀದರ್: ಬೀದರ್-ನಾಂದೇಡ್ (ವಯಾ ಔರಾದ್-ದೇಗಲೂರು) ಹೊಸ ರೈಲು ಮಾರ್ಗಕ್ಕೆ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‍ನಲ್ಲಿ ಅನುದಾನ ಒದಗಿಸಲಾಗಿದೆ ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ರೈಲು ಮಾರ್ಗದ ಕಾಮಗಾರಿಯನ್ನು ರೈಲ್ವೆ ಇಲಾಖೆಯ ಪಿಂಕ್ ಪುಸ್ತಕದಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

₹ 2,152 ಕೋಟಿ ವೆಚ್ಚದಲ್ಲಿ 155 ಕಿ.ಮೀ. ರೈಲು ಮಾರ್ಗ ನಿರ್ಮಾಣವಾಗಲಿದೆ. ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರದ ತಲಾ ಶೇ 50 ಅನುದಾನದ ಯೋಜನೆ ಇದಾಗಿದೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬೀದರ್‌ನಿಂದ ಔರಾದ್(ಕರ್ನಾಟಕ ಗಡಿ) ವರೆಗಿನ ಮಾರ್ಗಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ ಸಹಕಾರ ನೀಡಲು ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಹೊಸ ರೈಲು ಮಾರ್ಗ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಪ್ರವಾಸೋದ್ಯಮ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ. ಬೀದರ್ ಹಾಗೂ ನಾಂದೇಡ್‍ನ ಗುರುದ್ವಾರಗಳಿಗೆ ದೇಶದಾದ್ಯಂತ ಇರುವ ಸಿಖ್ ಭಕ್ತರು ಬರುವ ಕಾರಣ ಎರಡೂ ನಗರಗಳ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ. ಜನರ ಐದು ದಶಕಗಳ ಕನಸು ನನಸಾಗಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT