ಜನವಾಡ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ರಾಜ್ಯಪಾಲರ ವಿವೇಚನಾ ಕೋಟಾದಡಿ ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಅನುದಾನ ನೀಡಬೇಕು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಆಣದೂರ ಹೊರವಲಯದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಕಟ್ಟಡ ನಿರ್ಮಾಣ ಹಾಗೂ ಬೀದರ್ ವಿಶ್ವವಿದ್ಯಾಲಯಕ್ಕೂ ಅನುದಾನ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದರು.