ಬೀದರ್: ‘ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟಕ್ಕಷ್ಟೇ ಅನುಮತಿ ಇದೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯ ಪಟಾಕಿಗಳನ್ನು ಮಾರಾಟ ಮಾಡುವುದು ನಿಷೇಧಿಸಲಾಗಿದೆ ಎಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪಟಾಕಿ ವ್ಯಾಪಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ರಾತ್ರಿ 8 ರಿಂದ 10ರ ವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಆದಕಾರಣ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮುಜಮಿಲ್, ವಾಯುಮಾಲಿನ್ಯ ನಿಯಂತ್ರಣ ಅಧಿಕಾರಿ ಸಂತೋಷ ನಾಟಿಕರ ಮತ್ತು ವ್ಯಾಪಾರಸ್ಥರು ಹಾಜರಿದ್ದರು.

ಹಸಿರು ಪಟಾಕಿ ಗುರುತು ಹಸಿರು ಪಟಾಕಿಗಳನ್ನು ಸುಲಭವಾಗಿ ಗುರುತಿಸಲು ಹಸಿರು ಲೋಗೋ ಮತ್ತು ಕ್ಯೂಆರ್ ಕೋಡ್ ಅಭಿವೃದ್ಧಿ ಪಡಿಸಲಾಗಿದೆ. ಪಟಾಕಿಗಳ ಬಾಕ್ಸ್ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರೀಸರ್ಚ್ ಮತ್ತು ನ್ಯಾಷನಲ್ ಎನ್ವಿರಾನಮೆಂಟಲ್ ಎಂಜಿನಿಯರಿಂಗ್ ರೀಸರ್ಚ್ ಇನ್ಸ್ಟಿಟ್ಯೂಟ್ ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆ ಹೊಂದಿರುತ್ತದೆ. ಈ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ಈ ಪಟಾಕಿಗಳ ವಿವರ ತಿಳಿಯಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ ಪಕ್ಷಿಗಳು ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸುಡುಮದ್ದುಗಳನ್ನು ಸ್ಫೋಟಿಸುವಂತಿಲ್ಲ. ನಾಡಿನ ಜನತೆಯು ಇತರೆ ಜೀವಿಗಳು ಹಾಗೂ ಪರಿಸರದ ಕುರಿತು ಕಾಳಜಿಯೊಂದಿಗೆ ಈ ವರ್ಷದ ದೀಪಾವಳಿ ಹಬ್ಬವನ್ನು ವಾಯು ಮಾಲಿನ್ಯ ಹಾಗೂ ಶಬ್ಧ ಮಾಲಿನ್ಯ ರಹಿತವಾಗಿ ಆಚರಿಸಬೇಕೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.