‘ಅಕ್ಕ ಪಡೆ’ ರಾಜ್ಯದಾದ್ಯಂತ ವಿಸ್ತರಣೆ’
‘ಬೀದರ್ ಜಿಲ್ಲೆಯಲ್ಲಿ 10 ಜನ ಮಹಿಳಾ ಪೊಲೀಸ್ ತಂಡದಿಂದ ಅಕ್ಕ ಪಡೆ ರಚಿಸಿ ಶಾಲಾ- ಕಾಲೇಜು ಉದ್ಯಾನ ಹಾಸ್ಟೆಲ್ ಮೊದಲಾದ ಕಡೆ ನಿರಂತರ ನಿಗಾ ವಹಿಸುವ ಮೂಲಕ ಹೆಣ್ಣು ಮಕ್ಕಳಿಗೆ ವಿಶೇಷ ರಕ್ಷಣೆ ನೀಡುತ್ತಿರುವುದು ಶ್ಲಾಘನಾರ್ಹ ಕೆಲಸ. ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು. ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅಂಗನವಾಡಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಆಗ ಸರ್ಕಾರಕ್ಕೂ ಒಳ್ಳೆ ಹೆಸರು ಬರುತ್ತದೆ. ಸಮಾಜಕ್ಕೂ ಸಹಾಯವಾಗುತ್ತದೆ. ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿವೆ. ಅವುಗಳ ಕುರಿತು ಜನರಿಗೆ ಸರಿಯಾದ ಅರಿವಿಲ್ಲ. ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಮಹಿಳೆಯರಿಗೆ ಸಹಾಯ ಮಾಡಲು ಬೇಕಾದಷ್ಟು ಅವಕಾಶಗಳಿವೆ. ಈ ಮೂಲಕ ಹೆಚ್ಚು ಹೆಚ್ಚು ಜನರನ್ನು ತಲುಪಬೇಕು ಎಂದು ಸೂಚಿಸಿದರು.