ಮನ್ನಳ್ಳಿ(ಜನವಾಡ): ‘ಮಕ್ಕಳಲ್ಲಿ ಸಂವಿಧಾನ ಜಾಗೃತಿ ಮೂಡಿಸುವುದು ಅವಶ್ಯಕ’ ಎಂದು ಧಾರವಾಡದ ವಕೀಲ ಗುರು ಹಿರೇಮಠ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಜಾಪ್ರಭುತ್ವದ ಆಶಯಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಾಸ ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಂದ್ರ ಲಂಜವಾಡಕರ್ ಮಾತನಾಡಿ, ‘ಪ್ರತಿ ವ್ಯಕ್ತಿಗೂ ಗೌರವದಿಂದ ಬದುಕುವ ಹಕ್ಕು ನೀಡಿದ್ದೇ ಸಂವಿಧಾನ’ ಎಂದು ಹೇಳಿದರು.

ಪ್ರಾಚಾರ್ಯ ಶರಣಪ್ಪ ಎಸ್. ಮಲಗೊಂಡ ಅಧ್ಯಕ್ಷತೆ ವಹಿಸಿದ್ದರು. ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಮುಕ್ತುಂಬಿ ಎಂ, ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ನವರಂಗ ಮಾಣಿಕರಾವ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ರಾಜಕುಮಾರ ಟಿ., ಸಹ ಪ್ರಾಧ್ಯಾಪಕರಾದ ಜೈಶೀಲಾ, ಪೃಥ್ವಿರಾಜ್, ದಶವಂತ, ಸುರೇಂದ್ರಸಿಂಗ್, ಶಾಜಿಯಾ ಅಂಜುಮ್, ಸಹಾಯಕ ಪ್ರಾಧ್ಯಾಪಕರಾದ ಸುನೀಲಕುಮಾರ ಉಷಾರಾಣಿ, ಕಚೇರಿ ಅಧೀಕ್ಷಕ ಮಗದುಮ್, ಆನಂದ, ಅಯೂಬ್ ಇದ್ದರು.

ಸವಿತಾ ಪಾಟೀಲ ನಿರೂಪಿಸಿದರು. ರೇಣುಕಾ ಸ್ವಾಗತಿಸಿದರು. ಜ್ಞಾನಗಂಗಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.