ಭಾಲ್ಕಿ: ‘ಗ್ರಾಮೀಣ ಭಾಗದಲ್ಲಿ ಶಾಲೆ, ಕಾಲೇಜು ಆರಂಭಿಸಿ, ಗುಣಾತ್ಮಕ, ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಬಸವಲಿಂಗ ಪಟ್ಟದ್ದೇವರು ಹಳ್ಳಿಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನಲ್ಲಿ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆ ತೋರಿದ ಸಾಧಕರಿಗೆ ಸನ್ಮಾನಿಸಿ ಅವರು ಮಾತನಾಡಿದರು.

‘ಇಂದಿನ ಮಕ್ಕಳಲ್ಲಿ ಜ್ಞಾನದ ಕೊರತೆಯಿಲ್ಲ. ಅವರಿಗೆ ಸಕಾಲದಲ್ಲಿ ಸೂಕ್ತ ಮಾರ್ಗದರ್ಶನ, ಉತ್ತಮ ಸಂಸ್ಕಾರ, ಪ್ರೋತ್ಸಾಹ ದೊರೆತರೆ ಅವರು ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿ ಸಾಧನೆಗೈಯಲು ಸಾಧ್ಯವಿದೆ ಎಂಬುದನ್ನು ಗುರುಕುಲದ ವಿದ್ಯಾರ್ಥಿಗಳು ತೋರಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ರಾಷ್ಟ್ರದ ಗಮನ ಸೆಳೆಯುವಂತಹ ಪ್ರದರ್ಶನ ನೀಡುತ್ತಿರುವುದು ತುಂಬಾ ಸಂತೋಷದ ಸಂಗತಿ’ ಎಂದು ತಿಳಿಸಿದರು.

‘ಪ್ರತಿವರ್ಷ ನೀಟ್, ಜೆಇಇ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗುರುಕುಲ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರುತ್ತಿರುವುದರಿಂದ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳು ಸೇರಿದಂತೆ ರಾಷ್ಟ್ರದ ಇತರ ರಾಜ್ಯಗಳ ವಿದ್ಯಾರ್ಥಿಗಳು ಕೂಡ ಗುರುಕುಲ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವುದು ನಮ್ಮ ಭಾಗ ಶೈಕ್ಷಣಿಕವಾಗಿ ತುಂಬಾ ಮುಂದುವರಿದಿದೆ ಎಂಬುದನ್ನು ಸಾಬೀತು ಪಡಿಸುತ್ತದೆ’ ಎಂದು ಹೇಳಿದರು.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಹಳ್ಳಿಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವುದು ನಮ್ಮ ಕಾಲೇಜಿನಲ್ಲಿ ದೊರೆಯುತ್ತಿರುವ ಗುಣಾತ್ಮಕ ತರಬೇತಿ, ಶಿಕ್ಷಣಕ್ಕೆ ಸಾಕ್ಷಿ ಆಗಿದೆ’ ಎಂದು ತಿಳಿಸಿದರು.

ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನ ರೆಡ್ಡಿ, ಸಂಗಮೇಶ್ವರ ಕಾಲೇಜಿನ ಸ್ಥಾನಿಕ ಕಮಿಟಿ ಅಧ್ಯಕ್ಷ ಧನರಾಜ ಬಂಬುಳಗೆ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಅನಿಲ್ ಹಾಲಕೂಡೆ, ನಾಗೇಶ ಕಮಲನಗರ ಸೇರಿದಂತೆ ಇತರರು ಹಾಜರಿದ್ದರು.

ಸನ್ಮಾನ: ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆ ತೋರಿದ ವಿದ್ಯಾರ್ಥಿ ಅಭಿಷೇಕ ಶಂಕರ ಬಿರಾದಾರ 99.78 ಪರ್ಸೆಂಟೈಲ್, ಸುಮಿತ್ ರಾಜೇಂದ್ರ 99.54, ಶಿವಕುಮಾರ ಜಗನ್ನಾಥ 99.42, ಗಣೇಶ ಬಾಲಾಜಿ 99.41, ಪ್ರದ್ಯುಮ್ ಪಂಡರಿನಾಥ 99.28, ಅಭಿಷೇಕರೆಡ್ಡಿ ವೆಂಕಟರೆಡ್ಡಿ 99.25, ಅಸ್ಮಿತಾ ರಾಮ 99.23, ಗುಂಡಪ್ಪ ಮಾರುತಿ 99.23, ಶಶಾಂಕ ಭೀಮಶಾ 99.21, ಸಂಕಲ್ಪ ಸುಭಾಷ 99.18, ಸುಜಲ್ ದೀಪಕ 99.09 ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.