ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗವಿಕಲರು ದುರ್ಬರಲ್ಲ, ವಿಶೇಷ ಪ್ರತಿಭಾವಂತರು: ಸುರೇಖಾ

Published 28 ನವೆಂಬರ್ 2023, 16:12 IST
Last Updated 28 ನವೆಂಬರ್ 2023, 16:12 IST
ಅಕ್ಷರ ಗಾತ್ರ

ಬೀದರ್‌: ‘ಅಂಗವಿಕಲರು ದುರ್ಬರಲ್ಲ. ವಿಶೇಷ ಪ್ರತಿಭೆ ಹೊಂದಿರುತ್ತಾರೆ. ತಮ್ಮನ್ನು ತಾವು ದುರ್ಬಲರು ಎಂದು ಭಾವಿಸದೆ ಎಲ್ಲಾ ರೀತಿಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಅನೇಕ ಜನ ಅಂಗವಿಕಲರು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ  ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಛಾಪು ಮೂಡಿಸಿದ್ದಾರೆ. ಅವರಂತೆ ತಾವು ಕೂಡ ದೇಶಕ್ಕೆ ಹೆಸರು ತರಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಲು ಸಾಧ್ಯವಾಗುತ್ತದೆ. ಆರೋಗ್ಯವಂತರಾಗಿ ಜೀವನ ನಡೆಸಬಹುದು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಮಹೇಶ ಬಿರಾದಾರ ಮಾತನಾಡಿ,‘ಎಲ್ಲರೂ ಕೌಶಲಾಭಿವೃದ್ಧಿ, ಆರ್ಥಿಕ ವೃದ್ಧಿಗೆ ಒತ್ತು ನೀಡಿದಂತೆ ಕ್ರೀಡೆಗೂ ಒತ್ತು ನೀಡಬೇಕು. ಇಂದಿನ ದಿನಗಳಲ್ಲಿ ಹೆಚ್ಚಿನ ಯುವಕರು ಮೊಬೈಲ್ ಗೀಳಿಗೆ ಬಲಿಯಾಗಿ, ಕ್ರೀಡೆಗಳಲ್ಲಿ ಭಾಗವಹಿಸುವುದು ಕಡಿಮೆಯಾಗುತ್ತಿದೆ. ಇದರಿಂದ ಅಸಾಂಕ್ರಾಮಿಕ ರೋಗಗಳಾದ ಬಿಪಿ, ಶುಗರ್‌ಗೆ ತುತ್ತಾಗುತ್ತಿದ್ದಾರೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಇಂತಹ ರೋಗಗಳಿಗೆ ಬಲಿಯಾಗುವುದರಿಂದ ತಪ್ಪಿಸಬಹುದು’ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗೌತಮ ಅರಳಿ ಮಾತನಾಡಿ,‘ಅಂಗವಿಕಲರಿಗೆ ಆಯೋಜಿಸುವ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸುವಂತಾಗಬೇಕು ಎನ್ನುವ ಉದ್ಧೇಶದಿಂದ ಕ್ರೀಡಾಕೂಟವನ್ನು ಮುಂದಿನ ವರ್ಷ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಟ್ಟದಲ್ಲಿ ಆಯೋಜಿಸುವ ಚಿಂತನೆ ಇದೆ’ ಎಂದರು.

ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಾಗರಾಜ ಮಠ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕ ರಾಘವೇಂದ್ರ ನಾಯಕ, ಅನಿಲಕುಮಾರ ಬೆಲ್ದಾರ, ಮೊಗಲಪ್ಪ, ವಿಕಲಚೇತನ ವಿವಿಧೋದ್ದೇಶಗಳ ಪುನರ್ವಸತಿ ಕಾರ್ಯಕರ್ತರಾದ ಜಗನ್ನಾಥ ಗಾರಿ, ಶಿವಕುಮಾರ ಪಾಟೀಲ, ಬಾಬುರಾವ ರಾಥೋಡ, ಸುನಿಲ್ ಮಲ್ಗೆ, ಬಸವರಾಜ ದೇಶಮುಖ, ದೇವೇಂದ್ರ ನೈಕೋಡಿ, ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ವಿಕಲಚೇತನರ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ದೇಶಕ್ಕೆ ಹೆಸರು ತನ್ನಿ ಕ್ರೀಡೆಗಳಿಂದ ರೋಗ ದೂರ ಕ್ರೀಡೆಗೂ ಒತ್ತು ನೀಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT