ಗುರುವಾರ , ಸೆಪ್ಟೆಂಬರ್ 29, 2022
26 °C

20ರಂದು ಹುಮನಾಬಾದ್ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ‘ಸ್ಥಳೀಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ಸಮಾಜ ಕಲ್ಯಾಣ ಸಚಿವರಿಗೆ ಶಿಫಾರಸು ಮಾಡಿರುವುದನ್ನು ಖಂಡಿಸಿ 20ರಂದು ಹುಮನಾಬಾದ್ ಬಂದ್ ಮಾಡಲಾಗುತ್ತಿದೆ’ ಎಂದು ದಲಿತ ಹೋರಾಟ ಕ್ರಿಯಾ ಸಮಿತಿ ಅಧ್ಯಕ್ಷ ಅಂಕುಶ್ ಗೋಖಲೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ಚಂದ್ರಶೇಖರ ಪಾಟೀಲ ಹಾಗೂ ಭೀಮರಾವ್ ಪಾಟೀಲ ಅವರು ಮಡಿವಂತಿಕೆ ಮಾಡುವವರಿಗೆ ಮೀಸಲಾತಿ ನೀಡುವಂತೆ ಶಿಫಾರಸು ಮಾಡಿರು ವುದು ಸಮಾಜದ ಆಕ್ರೋಶಕ್ಕೆ ಕಾರಣವಾಗಿದೆ’ ಎಂದು ಅವರು ಹೇಳಿದರು.

‘20ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಲಕ್ಷ್ಮೀಪುತ್ರ ಮಾಳಗೆ, ಗೌತಮ್ ಸಾಗರ, ಅನೀಲ ದೊಡ್ಡಿ, ಗೌತಮ್ ಪ್ರಸಾದ್, ಗೌತಮ್ ಚೌವಾಣ್ ಸೇರಿದಂತೆ ಇತರರು ಈ ವೇಳೆ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.