ಮಂಗಳವಾರ, ಮೇ 17, 2022
23 °C

ಕಮಠಾಣದಲ್ಲಿ ಹರ್ಡಿಕರ್ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ಸ್ವಾಮಿ ವಿವೇಕಾನಂದ ನವೋದಯ ಹಾಗೂ ಮೊರಾರ್ಜಿ ತರಬೇತಿ ಕೇಂದ್ರದಲ್ಲಿ ಭಾರತ ಸೇವಾ ದಳದ ಸಂಸ್ಥಾಪಕ ನಾ.ಸು. ಹರ್ಡಿಕರ್ ಅವರ 133ನೇ ಜಯಂತಿ ಆಚರಿಸಲಾಯಿತು.

ಭಾರತ ಸೇವಾ ದಳದ ಜಿಲ್ಲಾ ಸಂಘಟಕ ಸಿದ್ದಣ್ಣ ಯಳಸಂಗಿ, ಹರ್ಡಿಕರ್ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ವಿವರಿಸಿದರು.

ಗ್ರಾಮ ಅಭಿವೃದ್ಧಿ ಸಂಘದ ಅಧ್ಯಕ್ಷ ದಶರಥ ಹಲಗೆ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಭೀಮಣ್ಣ ಕಮಠಾಣ ಅಧ್ಯಕ್ಷತೆ ವಹಿಸಿದ್ದರು. ಸ್ವಾಮಿ ವಿವೇಕಾನಂದ ಯುವ ಸೇವಾ ಸಂಸ್ಥೆಯ ಅಧ್ಯಕ್ಷ ರಮೇಶ ಮರ್ಜಾಪುರ, ಪ್ರಮುಖರಾದ ನಾಗೇಶ ಕಮಠಾಣ, ಮಾಣಿಕರಾವ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.