ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ರೋಡ್ ಶೋ

ಬೀದರ್: ‘ಬೀದರ್ ಉತ್ಸವದಲ್ಲಿ ಪಾಲ್ಗೊಳ್ಳಲು ಸೋಮವಾರ ನಗರಕ್ಕೆ ಆಗಮಿಸಿದ ಕನ್ನಡದ ಖ್ಯಾತ ನಟ, ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
ಶಿವರಾಜಕುಮಾರ ಅವರು ಬೆಳಿಗ್ಗೆ ಡಾ.ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳು ಹೂಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಶಿವರಾಜಕುಮಾರ ಅವರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ರೋಡ್ ಶೋ ನಡೆಯಿತು.
ದಾರಿಯುದ್ದಕ್ಕೂ ಜನ ಶಿವರಾಜಕುಮಾರ ಪರ ಘೋಷಣೆ ಕೂಗಿ, ಕುಣಿದು ಕುಪ್ಪಳಿಸಿ ಅಭಿಮಾನ ಮೆರೆದರು. ಕನ್ನಡಪರ ಸಂಘಟನೆಗಳು ಬೈಕ್ ರ್‍ಯಾಲಿ ಮೂಲಕ ನೆಚ್ಚಿನ ನಟನಿಗೆ ಸ್ವಾಗತ ಕೋರಿದವು.
ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ, ಮಾಜಿ ಶಾಸಕ ಅಶೋಕ ಖೇಣಿ ಸೇರಿದಂತೆ ಅನೇಕ ಮುಖಂಡರು, ಕನ್ನಡಾಭಿಮಾನಿಗಳು ರೋಡ್ ಶೋನಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಶಿವರಾಜಕುಮಾರ ಅವರು ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಮಾಲತಿ ಖೇಣಿ ಅವರ ಸ್ಮರಣಾರ್ಥವಾಗಿ ಆಯೋಜಿಸಿರುವ ಕ್ರಿಕೆಟ್ ಟೂರ್ನಮೆಂಟ್‍ಗೆ ಚಾಲನೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.