ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ : ಶ್ರೀರಾಮುಲು

ಆರೋಗ್ಯ ಸಚಿವ ಶ್ರೀರಾಮಲು ಟೀಕೆ
Last Updated 18 ಫೆಬ್ರುವರಿ 2020, 12:59 IST
ಅಕ್ಷರ ಗಾತ್ರ

ಬೀದರ್‌: ‘ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಸರ್ಕಾರ ಹಿಂದೇಟು ಹಾಕಿಲ್ಲ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ’ ಎಂದು ಆರೋಗ್ಯ ಸಚಿವ ಶ್ರೀರಾಮಲು ಟೀಕಿಸಿದರು.

‘ಸಿದ್ದರಾಮಯ್ಯ ಅವರು ಪೊಲೀಸರು ಬಿಜೆಪಿ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದೇಶದ್ರೋಹದ ಪ್ರಕರಣ ದಾಖಲಿಸುತ್ತಿದ್ದಾರೆ ಎನ್ನುವುದು ಶುದ್ಧ ಸುಳ್ಳು’ ಎಂದು ನಗರದಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ಬಿಜೆಪಿ ಸರ್ಕಾರ ಪಾರದರ್ಶಕ ಆಡಳಿತ ಕೊಡುತ್ತಿದೆ. ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದವರನ್ನು ಈಗಾಗಲೇ ಬಂಧಿಸಲಾಗಿದೆ. ಪಾಕಿಸ್ತಾನಕ್ಕೆ ಜೈ ಎನ್ನುವುದರಿಂದ ನಿಮ್ಮ ವೋಟ್‌ ಬ್ಯಾಂಕ್‌ ಬೆಳೆಯುತ್ತದೆಯೇ’ ಎಂದು ಪ್ರಶ್ನಿಸಿದ ಅವರು, ‘ಪಾಕಿಸ್ತಾನಕ್ಕೆ ಜೈ ಎಂದರೆ ಸುಮ್ಮನೆ ಕುಳಿತುಕೊಳ್ಳಲಾಗದು. ಕಾಂಗ್ರೆಸ್‌ನವರಿಗೆ ಭಾರತಕ್ಕಿಂತ ಪಾಕಿಸ್ತಾನದ ಮೇಲೆಯೇ ಹೆಚ್ಚು ಪ್ರೀತಿ ಇದೆ’ ಎಂದರು.

‘ಬೀದರ್‌ನ ಶಾಹೀನ್‌ ಶಿಕ್ಷಣ ಸಂಸ್ಥೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಷ್ಟೇಕೆ ಪ್ರೀತಿ?. ದೇಶದ್ರೋಹಿಗಳು ಯಾರೇ ಇರಲಿ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಸಿದ್ದರಾಮಯ್ಯ ಅವರಿಗೆ ಅಧಿವೇಶನ ಬಹಿಷ್ಕರಿಸುವುದು ಶೋಭೆ ತರುವುದಿಲ್ಲ’ ಎಂದು ಹೇಳಿದರು.

‘ಒಂದು ದಿನದ ಅಧಿವೇಶನಕ್ಕೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ಸದನದಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳುವುದು ಬಿಟ್ಟು ಬಹಿಷ್ಕಾರ ಮಾಡಿರುವುದು ಸರಿಯಲ್ಲ. ಸದನದಿಂದ ಹೊರಗೆ ಬಂದ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಾರೆ. ಸದನದಲ್ಲಿ ಇದ್ದರೆ ಏನೂ ಮಾತನಾಡುವುದಿಲ್ಲ’ ಎಂದು ಜರಿದರು.

ಅವರು ಆಪ್ತರಿಗೆ ತಮ್ಮ ಮಗಳ ಮದುವೆ ಆಮಂತ್ರಣ ಪತ್ರಿಕೆ ನೀಡಲು ಬೀದರ್‌ಗೆ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT