ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವದಗಿ: ಆರೋಗ್ಯ ಅಧಿಕಾರಿಗಳ ತಂಡ ಭೇಟಿ

ಗ್ರಾಮದಲ್ಲಿ ಪಾಳುಬಿದ್ದ ಆರೋಗ್ಯ ಉಪಕೇಂದ್ರ; ಲಸಿಕೆ ಪಡೆಯಲು ಪರದಾಟ
Last Updated 18 ಮೇ 2021, 3:12 IST
ಅಕ್ಷರ ಗಾತ್ರ

ನಾವದಗಿ (ಖಟಕಚಿಂಚೋಳಿ): ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮಕ್ಕೆ ಸೋಮವಾರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಆರೋಗ್ಯ ಇಲಾಖೆ ಉಪಕೇಂದ್ರದ ಮಾಹಿತಿ ಪಡೆದುಕೊಂಡಿತು.

‘ಪಾಳುಬಿದ್ದ ಆರೋಗ್ಯ ಉಪಕೇಂದ್ರ, ಅಂಗನವಾಡಿ, ಗುಡಿಯಲ್ಲಿ ಜನರಿಗೆ ಲಸಿಕೆ’ ಶೀರ್ಷಿಕೆ ಅಡಿಯಲ್ಲಿ ಮೇ 17ರ ಸಂಚಿಕೆಯಲ್ಲಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.

ವರದಿಗೆ ಸ್ಪಂದಿಸಿದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ಭಂಗೂರೆ ಅವರಿಂದ ಮಾಹಿತಿ ಪಡೆಯಿತು.

ತಾಲ್ಲೂಕು ಆರೋಗ್ಯ ಅಧಿಕಾರಿ ಜ್ಞಾನೇಶ್ವರ ನಿರಗುಡೆ ಮಾತನಾಡಿ, ‘ಮುಂದಿನ ಎರಡು– ಮೂರು ದಿನಗಳಲ್ಲಿ ಉಪಕೇಂದ್ರಕ್ಕೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೇಳಿದರು.

‘ಲಸಿಕೆ ಬಗ್ಗೆ ಗ್ರಾಮದ ಜನರು ಭಯಪಡುವ ಅವಶ್ಯಕತೆ ಇಲ್ಲ. ಲಸಿಕೆ ಪಡೆಯುವುದರಿಂದ ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಬೀರುವುದಿಲ್ಲ’ ಎಂದು ತಿಳಿಸಿದರು.

‘ಮೇ 18ರಂದು 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗುವುದು. ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ, ಸಹಾಯಕ ಕೃಷಿ ನಿರ್ದೇಶಕ ಆನಂದ ಬೇಲೂರೆ, ವೈದ್ಯಾಧಿಕಾರಿ ಡಾ.ಪ್ರವೀಣ, ಪಂಚಾಯಿತಿ ಸದಸ್ಯ ರಾಜಶೇಖರ ಬಿರಾದಾರ, ಕಿರಿಯ ಆರೋಗ್ಯ ಸಹಾಯಕಿ ಪ್ರತಿಭಾ, ಪ್ರಮುಖರಾದ ನಾಗನಾಥ ಬಿರಾದಾರ, ಬಸವರಾಜ ಬೇಲೂರೆ, ಪ್ರಭುದೇವ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT