ಭಾನುವಾರ, ಜೂನ್ 20, 2021
29 °C

ಸ್ತನ್ಯಪಾನದಿಂದ ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ತಾಯಿಯ ಎದೆಹಾಲು ಉಣಿಸುವುದರಿಂದ ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆ ಆಗುತ್ತದೆ ಎಂದು ಡಾ. ಶರಣ ಬುಳ್ಳಾ ಹೇಳಿದರು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ, ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಹಾಗೂ ಬ್ರಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ವತಿಯಿಂದ ನಗರದ ಎಫ್‍ಪಿಎಐ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನವಜಾತ ಶಿಶುಗಳಿಗೆ ತಾಯಿ ಹಾಲು ಅಮೃತ ಇದ್ದ ಹಾಗೆ. ಹೀಗಾಗಿ ಮಕ್ಕಳಿಗೆ ತಪ್ಪದೇ ಎದೆಹಾಲು ಕುಡಿಸಬೇಕು ಎಂದು ಸಲಹೆ ಮಾಡಿದರು.

ಮಗು ಜನಿಸಿದ ಒಂದು ಗಂಟೆಯ ಒಳಗೆ ಸ್ತನ್ಯಪಾನ ಮಾಡಿಸಬೇಕು. ಆರು ತಿಂಗಳವರೆಗೂ ಕಡ್ಡಾಯವಾಗಿ ಸ್ತನ್ಯಪಾನ ಮಾಡಿಸುತ್ತಿರಬೇಕು. ಆರು ತಿಂಗಳ ನಂತರ ಸ್ತನ್ಯಪಾನದ ಜತೆಗೆ ಅಲ್ಪ ಆಹಾರವನ್ನೂ ನೀಡಬಹುದು. ಎರಡು ವರ್ಷ ಹಾಗೂ ಅದಕ್ಕೂ ಹೆಚ್ಚಿನ ಅವಧಿಗೆ ಸ್ತನ್ಯಪಾನ ಮಾಡಿಸುವುದು ಮಕ್ಕಳ ಬೆಳವಣಿಗೆಯ ದೃಷ್ಟಿಯಿಂದ ಒಳ್ಳೆಯದು ಎಂದು ತಿಳಿಸಿದರು.

ಎಫ್‍ಪಿಎಐ ಸ್ಥಳೀಯ ಶಾಖೆ ಅಧ್ಯಕ್ಷೆ ಡಾ. ಆರತಿ ರಘು ಕೃಷ್ಣಮೂರ್ತಿ, ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ, ಕಾರ್ಯದರ್ಶಿ ಡಾ. ಕಪಿಲ್ ಪಾಟೀಲ, ನಿಕಟಪೂರ್ವ ಕಾರ್ಯದರ್ಶಿ ಡಾ. ನಿತೇಶಕುಮಾರ ಬಿರಾದಾರ, ಶಿವಕುಮಾರ ಪಾಕ್ಕಾಲ್, ಡಾ. ಶಿಲ್ಪಾ ಬುಳ್ಳಾ, ಉಪಸ್ಥಿತರಿದ್ದರು. ಎಫ್‍ಪಿಎಐ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು