ಆರೋಗ್ಯವಂತರೇ ಸಮಾಜದ ಆಸ್ತಿ

ಮಂಗಳವಾರ, ಮಾರ್ಚ್ 26, 2019
22 °C
ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ ಹೇಳಿಕೆ

ಆರೋಗ್ಯವಂತರೇ ಸಮಾಜದ ಆಸ್ತಿ

Published:
Updated:
Prajavani

ಬೀದರ್: ‘ಆರೋಗ್ಯವಂತರೇ ಸಮಾಜದ ನಿಜವಾದ ಆಸ್ತಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಶನಿವಾರ ಆಯುಷ್ ಇಲಾಖೆ, ಸ್ನಾತಕೋತ್ತರ ಕನ್ನಡ ಅಧ್ಯಯನ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಆಯೋಜಿಸಿದ್ದ ಒಂದು ದಿನದ ಜಿಲ್ಲಾ ಮಟ್ಟದ ಆಯುಷ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಯೋಗ ಹಾಗೂ ಆಯುರ್ವೇದದಿಂದ ಆರೋಗ್ಯಕರ ವಾತಾವರಣ ನಿರ್ಮಾಣಗೊಳ್ಳುತ್ತದೆ. ಜೀವನದಲ್ಲಿ ಸಾಧನೆ ಮಾಡುವಲ್ಲಿ ಉತ್ತಮ ಆರೋಗ್ಯವು ಮುಖ್ಯ ಪಾತ್ರ ವಹಿಸುತ್ತದೆ. ಯುವಕರು ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಯ್ದುಕೊಳ್ಳಬೇಕು’ ಎಂದು ಹೇಳಿದರು.

‘ಪ್ರತಿಯೊಬ್ಬರು ತಮ್ಮತನವನ್ನು ಅರಿತುಕೊಳ್ಳಬೇಕು. ಅಂದಾಗಲೇ ಭವಿಷ್ಯದಲ್ಲಿ ದೊಡ್ಡ ವ್ಯಕ್ತಿಯಾಗಲು ಸಾಧ್ಯವಿದೆ. ಜೀವನದಲ್ಲಿ ಎದುರಾಗುವ ಪ್ರತಿಯೊಂದು ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಬೇಕು’ ಎಂದು ತಿಳಿಸಿದರು.

ಸ್ನಾತಕೋತ್ತರ ಕನ್ನಡ ಅಧ್ಯಯನ ಮತ್ತು ಸಂಶೋಧನೆ ಕೇಂದ್ರದ ಮುಖ್ಯಸ್ಥ ಡಾ.ಜಗನ್ನಾಥ ಹೆಬ್ಬಾಳೆ ಮಾತನಾಡಿ,‘ಆಯುಷ್‌ ಚಿಕಿತ್ಸಾ ಪದ್ಧತಿಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗುವುದಿಲ್ಲ. ಆದರೆ, ಅಲೋಪತಿಯಿಂದ ಅಡ್ಡ ಪರಿಣಾಮ ಆಗುತ್ತವೆ’ ಎಂದರು.

ಆಯುಷ್ ಇಲಾಖೆಯ ಅಧಿಕಾರಿ ಡಾ.ಶಾರದಾ ಸಂಬ್ರೇಕರ್ ಮಾತನಾಡಿ,‘ರೋಗಿಗಳನ್ನು ನಿರೋಗಿಯಾಗಿ ಮಾಡುವುದೇ ಇಲಾಖೆಯ ಉದ್ದೇಶವಾಗಿದೆ’ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಸಿದ್ರಾಮ ಪಾರಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಚಾರ್ಯ ಡಾ.ಎಂ.ಎಸ್.ಪಾಟೀಲ ಸ್ವಾಗತಿಸಿದರು. ಸುನೀತಾ ಕೂಡ್ಲಿಕರ್ ನಿರೂಪಿಸಿದರು. ಸುರೇಖಾ ಬಿರಾದಾರ ವಂದಿಸಿದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕುರಿತು ಡಾ.ಬಾಬಾಸಾಹೇಬ್ ಗಡ್ಡೆ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆ ಕುರಿತು ಡಾ.ಜಗನ್ನಾಥ ಹೆಬ್ಬಾಳೆ, ಸ್ತ್ರೀ ರೋಗಗಳು ಹಾಗೂ ಅವುಗಳ ಉಪಚಾರ ಕುರಿತು ಡಾ.ವಚನಶೃತಿ, ವ್ಯಕ್ತಿತ್ವ ವಿಕಸನ ಕುರಿತು ಡಾ.ಉಮಾಕಾಂತ ಪಾಟೀಲ ಹಾಗೂ ಆಯುರ್ವೇದ ಔಷಧಗಳ ಕುರಿತು ಡಾ.ಲೋನಿಮಠ ಉಪನ್ಯಾಸ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !