ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಜಿಲ್ಲೆಯಲ್ಲಿ ಧಾರಾಕಾರ ಮಳೆ; ಮನೆಗಳಿಗೆ ನೀರು

Last Updated 10 ಸೆಪ್ಟೆಂಬರ್ 2022, 8:24 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಬೀದರ್‌, ಭಾಲ್ಕಿ, ಹುಲಸೂರು ಹಾಗೂ ಹುಮನಾಬಾದ್ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಸಮೀಪದ ದಾಡಗಿ ಗ್ರಾಮದಲ್ಲಿ ಕಾರಂಜಾ ಜಲಾಶಯದ ಚಿಕ್ಕ ಕಾಲುವೆ ಮಳೆಗೆ ಒಡೆದು ಹೊಲಗಳಿಗೆ ನೀರು ನುಗ್ಗಿ ಬೆಳೆ ಕೊಚ್ಚಿಕೊಂಡು ಹೋಗಿವೆ.

ಬೀದರ್ ತಾಲ್ಲೂಕಿ ಮರಕಲ್‌ ಗ್ರಾಮದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ಆಹಾರಧಾನ್ಯಗಳು ನೀರು ಪಾಲಾಗಿವೆ. ಮನೆಯಲ್ಲಿ ಮೊಣಕಾಲಷ್ಟು ನೀರು ನಿಂತಿರುವ ಕಾರಣ ಕುಟುಂಬಗಳು ಕಂಗಾಲಾಗಿವೆ.

ಬೀದರ್‌ನ ಓಲ್ಡ್‌ ಸಿಟಿಯಲ್ಲಿ ಮಳೆಗೆ ಗಟಾರಗಳು ಉಕ್ಕಿ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.ಚೌಬಾರಾದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ.

ಶುಕ್ರವಾರ ರಾತ್ರಿಯಿಡೀ ಸುರಿದಿರುವ ಮಳೆ ಬೆಳಿಗ್ಗೆ ಎರಡು ತಾಸು ಬಿಡುವು ನೀಡಿತ್ತು. ಶನಿವಾರ 10 ಗಂಟೆಯಿಂದ ಮತ್ತೆ ನಿರಂತರವಾಗಿ ಸುರಿಯುತ್ತಿದೆ. ಬೀದರ್‌, ಭಾಲ್ಕಿ, ಹುಲಸೂರು ಹಾಗೂ ಹುಮನಾಬಾದ್ ತಾಲ್ಲೂಕಿನ ಹೊಲಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT