ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ಬೀದರ್‌: ನಿರಂತರ ಮಳೆಗೆ ಹೆಸರು, ಉದ್ದಿಗೆ ಕುತ್ತು

Published : 19 ಆಗಸ್ಟ್ 2025, 5:29 IST
Last Updated : 19 ಆಗಸ್ಟ್ 2025, 5:29 IST
ಫಾಲೋ ಮಾಡಿ
Comments
ಬೀದರ್‌ನ ದೇವಿ ಕಾಲೊನಿಯ ರಸ್ತೆಯಲ್ಲಿ ಸಂಗ್ರಹಗೊಂಡಿರುವ ಮಳೆ ನೀರು
ಬೀದರ್‌ನ ದೇವಿ ಕಾಲೊನಿಯ ರಸ್ತೆಯಲ್ಲಿ ಸಂಗ್ರಹಗೊಂಡಿರುವ ಮಳೆ ನೀರು
ಈಗ ಉದ್ದು ಹೆಸರು ರಾಶಿ ಮಾಡುವ ಸಮಯ. ಆದರೆ ಮಳೆ ಸುರಿಯುತ್ತಿರುವುದರಿಂದ ಕಟಾವು ಸಾಧ್ಯವಾಗಿಲ್ಲ. ಮಳೆ ಬಿಡುವು ಕೊಡದಿದ್ದರೆ ಬೆಳೆ ಹಾಳಾಗುವ ಸಾಧ್ಯತೆ ಹೆಚ್ಚಿದೆ.
–ದೇವಿಕಾ ಆರ್‌. ಜಂಟಿ ಕೃಷಿ ನಿರ್ದೇಶಕಿ ಬೀದರ್‌
ಸಂತ್ರಸ್ತರಿಗೆ ಪರಿಹಾರಕ್ಕೆ ಬಿಜೆಪಿ ಆಗ್ರಹ
ಬೀದರ್‌: ಔರಾದ್‌ ಹಾಗೂ ಕಮಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಮೇಘ ಸ್ಫೋಟ ಸಂಭವಿಸಿ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು ಜಿಲ್ಲೆಯ ಇಬ್ಬರು ಸಚಿವರು ಸ್ಥಳದಲ್ಲೇ ಠಿಕಾಣಿ ಹೂಡಿ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕೆಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಬಿರಾದಾರ ಒತ್ತಾಯಿಸಿದ್ದಾರೆ. ಬೀದರ್‌ ಜಿಲ್ಲೆಯ ಇತಿಹಾಸದಲ್ಲಿಯೇ ಇಷ್ಟೊಂದು ಮಳೆ ಎಂದೂ ಬಿದ್ದಿರಲಿಲ್ಲ. ಭಾರಿ ಮಳೆಗೆ ಭಾರಿ ಹಾನಿ ಆಗಿದೆ. ಕೂಡಲೇ ರೈತರು ಸಾರ್ವಜನಿಕರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಹಾರ–ರಕ್ಷಣಾ ಕಾರ್ಯಕ್ಕೆ ಸಚಿವರ ಸೂಚನೆ
ಬೀದರ್‌: ಜಿಲ್ಲೆಯ ಕಮಲನಗರ ಹಾಗೂ ಔರಾದ್‌ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆಯಿಂದಾದ ಹಾನಿ ಜಾನುವಾರುಗಳ ಸಾವಿಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಕೂಡಲೇ ಪರಿಹಾರ ಮತ್ತು ರಕ್ಷಣಾ ಕಾರ್ಯ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದಾರೆ. ಜಿಲ್ಲಾಧಿಕಾರಿ ಸೋಮವಾರ ಅಧಿಕೃತ ಟಿಪ್ಪಣಿ ಕಳಿಸಿ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಕಡಿತಗೊಂಡಿರುವ ರಸ್ತೆ ವಿದ್ಯುತ್ ಸಂಪರ್ಕ ಮರು ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ತತ್ ಕ್ಷಣದ ಪರಿಹಾರ ಮತ್ತು ರಕ್ಷಣಾ ಕಾರ್ಯ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಬೆಳೆ ಹಾನಿ ಮತ್ತು ಜಾನುವಾರು ಹಾನಿಯ ಬಗ್ಗೆ 24 ಗಂಟೆಯೊಳಗೆ ಪ್ರಾಥಮಿಕ ವರದಿ ಸಲ್ಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT