ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿವೃಷ್ಟಿ: ಎಕರೆಗೆ ₹ 50 ಸಾವಿರ ಪರಿಹಾರಕ್ಕೆ ಆಗ್ರಹ

Last Updated 11 ಆಗಸ್ಟ್ 2022, 8:21 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ ರೈತರಿಗೆ ಎಕರೆಗೆ ₹ 50 ಸಾವಿರ ಪರಿಹಾರ ಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.
ವಾರದೊಳಗೆ ಅತಿವೃಷ್ಟಿ ಪರಿಹಾರ ಹಾಗೂ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿದ ರೈತರಿಗೆ ಬಾಕಿ ಹಣ ಕೊಡಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಕಾರ್ಯದರ್ಶಿ ದಯಾನಂದ ಸ್ವಾಮಿ, ಬಾಬುರಾವ್ ಜೊಳದಾಪಕೆ, ಪ್ರವೀಣ ಕುಲಕರ್ಣಿ, ಶಂಕರೆಪ್ಪ ಪಾರಾ, ನಾಗಯ್ಯ ಸ್ವಾಮಿ, ಬಾಬುರಾವ್ ಬೆಟ್ಟದ್, ಮಲ್ಲಿಕಾರ್ಜುನ ಚಿಕ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT