ಮಂಗಳವಾರ, ಜೂನ್ 28, 2022
26 °C

ಬೀದರ್: ಸಿಡಿಲು ಬಡಿದು ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಬಸವಕಲ್ಯಾಣ, ಹುಲಸೂರ, ಹುಮನಾಬಾದ್ ಹಾಗೂ ಭಾಲ್ಕಿ ತಾಲ್ಲೂಕುಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಸಿಡಿಲು ಬಡಿದು ಪಾರ್ವತಿ ನಂದಕುಮಾರ (40) ಮೃತಪಟ್ಟಿದ್ದಾರೆ.

‘ಮಂಗಳವಾರ ಹೊಲದಲ್ಲಿ ತೊಗರಿ ಕೊಯ್ಲು ಆರಿಸುತ್ತಿದ್ದಾಗ ಸಿಡಿಲು ಬಡಿದಿದೆ. ಖಟಕಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪಿಎಸ್ಐ ಶೇಖ್ ಷಾ ಪಟೇಲ್ ತಿಳಿಸಿದ್ದಾರೆ.

ಹುಮನಾಬಾದ್ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಡುಗು, ಮಿಂಚು ಹಾಗೂ ಗಾಳಿಯ ಆರ್ಭಟ ಜೋರಾಯಿತು. 4 ಗಂಟೆಗೆ ಗುಡುಗು ಸಹಿತ 15 ನಿಮಿಷ ಮಳೆ ಸುರಿಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.