ಬೀದರ್: ಔರಾದ್ ತಾಲ್ಲೂಕಿನ ಕೌಠಾ ಸಮೀಪದ ಮಂಜ್ರಾ ನದಿ ಸೇತುವೆ ಪಕ್ಕದ ಮಣ್ಣು ಇನ್ನಷ್ಟು ಕೆಳಗೆ ಕುಸಿದಿದೆ. ಗೋದಾವರಿ ಜಲಾನಯನ ಪ್ರದೇಶದಲ್ಲಿ ರಾತ್ರಿ ಭಾರಿಯಾಗಿದ್ದು, ಮಳೆಯ ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಸಮೀಪದ ಕಾರಂಜಾ ಜಲಾಶಯಕ್ಕೆ ಒಂದು ವಾರದ ಅವಧಿಯಲ್ಲಿ ಒಂದೂವರೆ ಟಿಎಂಸಿ ನೀರು ಹರಿದು ಬಂದಿದೆ.

ಭಾಲ್ಕಿ ತಾಲ್ಲೂಕಿನಲ್ಲಿ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಯಿಂದ ಉಚ್ಚಾ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದೆ.
ಓಣಿಗಳಲ್ಲಿ ಅಪಾರ ನೀರು ಹರಿಯುತ್ತಿದೆ. ರೈತರ ಹೊಲದಲ್ಲಿ ಬೆಳೆದ ಬೆಳೆಗಳು ಕೊಚ್ಚಿಕೊಂಡು ಹೋಗಿವೆ.

ಕಮಲನಗರ ತಾಲ್ಲೂಕಿನ ಹೊಳಸಮುದ್ರದಿಂದ ಹುಲಸೂರಕ್ಕೆ ಹೋಗುವ ಮಾರ್ಗದಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. 150ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. ಬೆಳಕುಣಿ ಗ್ರಾಮದ ಸೇತುವೆ ಮೇಲೆ ನೀರು ಬಂದು ಸಂಚಾರ ಸ್ಥಗಿತಗೊಂಡಿದೆ.

ಬಸವಕಲ್ಯಾಣ ತಾಲ್ಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಂಡೂರಿ ನಾಲಾ, ಬೆಣ್ಣೆತೊರೆ ನದಿ ತುಂಬಿ ಹರಿದು ಹೊಲಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಗೋರಟಾ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ನೀರು ನುಗ್ಗಿ ಮನೆಗಳಿಗೆ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಬಗದಲ್, ಕಾಡವಾಡ್, ಯದಲಾಪುರದಲ್ಲಿ ಭಾರಿ ಮಳೆಯಾಗಿ ಅಪಾರ ಬೆಳೆ ನಷ್ಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.