ಶನಿವಾರ, ಮೇ 15, 2021
24 °C

ಬೆಳೆ, ಮಣ್ಣಿನ ಸಮಸ್ಯೆಗೆ ಸಹಾಯವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಜಿಲ್ಲೆಯ ರೈತರು ತಮ್ಮ ಬೆಳೆಗಳ ಹಾಗೂ ಮಣ್ಣಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 155313ಗೆ ಕರೆ ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ತಾರಾರಾಣಿ ತಿಳಿಸಿದ್ದಾರೆ.

ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಟಿ, ಅತಿವೃಷ್ಟಿ, ಕೀಟ ಹಾಗೂ ರೋಗಬಾಧೆ ಮತ್ತು ಮಣ್ಣಿನ ಫಲವತ್ತತೆ ಹಾಗೂ ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಗುಣಮಟ್ಟ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗ ಕೀಟಗಳ ಹತೋಟಿ, ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಲಿದೆ.

ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾ ಹಿಸುವುದು ಹಾಗೂ ಮಣ್ಣಿನ ಪೋಷ ಕಾಂಶಗಳ ಕೊರತೆ ಮತ್ತು ಸಮರ್ಪಕ ನಿರ್ವಹಣೆ ಕುರಿತಂತೆ, ರೈತರ ತಾಲ್ಲೂಕು ಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ನೀಡಲು ಸಂಚಾರಿ ಆರೋಗ್ಯ ಚಿಕಿತ್ಸಾಲಯ ವನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ.

ಈ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ವಾಹನವು ಕೀಟ ಮತ್ತು ರೋಗಗಳ ಬಾಧೆಯನ್ನು ನಿಖರವಾಗಿ ಹಾಗೂ ಸಮಯೋಚಿತವಾಗಿ ಗುರುತಿಸಲು ಮತ್ತು ಸಲಹೆ ನೀಡಲು ಇ-ತಂತ್ರಾಂಶ (ಇ-ಸ್ಯಾಪ್)ವನ್ನು ಅಳವಡಿಸಲಾಗಿದೆ.

ಮಣ್ಣಿನ ರಸಸಾರ ಹಾಗೂ ಸಾವಯವ ಇಂಗಾಲವನ್ನು ತ್ವರಿತವಾಗಿ ಸಂವೇಧಕಗಳನ್ನು ಬಳಸಿ ಪರಿಕ್ಷಿಸಬಹು ದಾಗಿದೆ. ರೈತರು ತಮ್ಮ ಮಟ್ಟದಲ್ಲಿಯೇ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು ಗುಣಮಟ್ಟದ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು