ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುಕಟ್ಟೆ ಅರಿವಿದ್ದರೆ ಅಧಿಕ ಆದಾಯ: ಡೀನ್ ಡಾ. ದಿಲೀಪಕುಮಾರ

ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ಆರಂಭ
Last Updated 6 ಮಾರ್ಚ್ 2023, 16:13 IST
ಅಕ್ಷರ ಗಾತ್ರ

ಜನವಾಡ: ಮಾರುಕಟ್ಟೆ ಅರಿವಿದ್ದರೆ ಕೋಳಿ ಸಾಕಾಣಿಕೆಯಲ್ಲಿ ಅಧಿಕ ಆದಾಯ ಗಳಿಸಬಹುದು ಎಂದು ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ದಿಲೀಪಕುಮಾರ ಹೇಳಿದರು.

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿರುವ ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೋಳಿ ಸಾಕಾಣಿಕೆ ಜಮೀನು ಇಲ್ಲದ ಕೃಷಿಯಾಗಿದೆ ಎಂದು ನುಡಿದರು.

ಸದ್ಯ ಪೌಷ್ಟಿಕ ಆಹಾರಕ್ಕೆ ಬೇಡಿಕೆ ಹೆಚ್ಚಾಗಿದೆ. ವೈಜ್ಞಾನಿಕ ಮಾಹಿತಿ ಪ್ರಕಾರ ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ವರ್ಷಕ್ಕೆ 182 ಮೊಟ್ಟೆ ಹಾಗೂ 10.8 ಕೆ.ಜಿ. ಮಾಂಸ ಸೇವಿಸಬೇಕು ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಡಾ. ಯೋಗೇಂದ್ರ ಕುಲಕರ್ಣಿ ಹೇಳಿದರು.

ರೈತರು ಆದಾಯ ಹೆಚ್ಚಿಸಿಕೊಳ್ಳಲು ಕೃಷಿಯೊಂದಿಗೆ ಉಪ ಕಸುಬಾಗಿ ಕೋಳಿ ಸಾಕಣೆ ಮಾಡಬೇಕು. ಪ್ರಸ್ತುತ ಹೆಚ್ಚು ಗುಣಮಟ್ಟದ ಮಾಂಸ ಹಾಗೂ ಮೊಟ್ಟೆ ಉತ್ಪಾದನೆ ಅವಶ್ಯಕವಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ತಿಳಿಸಿದರು.

ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಓಂಕಾರ ಪಾಟೀಲ, ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಜಿ.ಎನ್. ಶ್ರೀಧರ ಅವರು, ಕೋಳಿ ಸಾಕಾಣಿಕೆಗೆ ಸಂಬಂಧಿಸಿದ ಸರ್ಕಾರದ ಯೋಜನೆಗಳು, ಕೋಳಿಗಳಿಗೆ ಬರುವ ರೋಗಗಳು ಹಾಗೂ ಲಸಿಕೆ ಕುರಿತು ಮಾಹಿತಿ ನೀಡಿದರು.
ವಿಜ್ಞಾನಿ ಡಾ. ಅಕ್ಷಯಕುಮಾರ ಸ್ವಾಗತಿಸಿದರು. ತೋಟಗಾರಿಕೆ ವಿಜ್ಞಾನಿ ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಸಿದ್ದು ಮಣಗೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT