ಮಂಗಳವಾರ, ಅಕ್ಟೋಬರ್ 4, 2022
27 °C

ಹಿಂದಿ ದಿವಸ ಆಚರಣೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಹಿಂದಿ ದಿವಸ ಆಚರಣೆ ವಿರೋಧಿಸಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಪ್ರಮುಖರು ಮಾತನಾಡಿ,‘ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾಗಿ ಭಾಷೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ ಈಗ ಕೇವಲ ಒಂದು ಭಾಷೆ ಹೇರುತ್ತಿರುವುದು ಖಂಡನೀಯ’ ಎಂದರು.

ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡಬಾರದು ಎಂದು ಆಗ್ರಹಿಸಿದರು.

ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಡಾ.ಪ್ರದೀಕುಮಾರ್ ಹಿರೇಮಠ ಅವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ವೀರೇಶ್ ಸೀಗಿ, ಚಾಂದ್ ಪಾಷ, ಮುಜಬಲ ಹಸ್ಸನ್, ಸತೀಶ ರಾಂಪುರೆ, ಎಂ.ಡಿ.ಶೇಕ್ ಮೀರಾನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.