ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈ.ಕ ಅಭಿವೃದ್ಧಿ ಮಂಡಳಿ ಸಲಹಾ ಸಮಿತಿ ಸಭೆ

Last Updated 1 ಜುಲೈ 2019, 15:27 IST
ಅಕ್ಷರ ಗಾತ್ರ

ಬೀದರ್: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಕ್ರಿಯಾಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಸಲಹಾ ಸಮಿತಿಯ ಸಭೆ ನಡೆಯಿತು.

ಪ್ರಸಕ್ತ ಸಾಲಿನ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿಯಲ್ಲಿ ಕ್ರಿಯಾಯೋಜನೆ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲು ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ಸಾಮಾಜಿಕ ವಲಯಕ್ಕೆ ಶೇಕಡ 40 ಹಾಗೂ ಸಾಮಾಜಿಕೇತರ ವಲಯಕ್ಕೆ ಶೇಕಡ 60 ರಂತೆ ಪ್ರಸ್ತಾವಕ್ಕೆ ಜಿಲ್ಲಾ ಸಮಿತಿಯಲ್ಲಿ ಅನುಮೋದನೆ ಪಡೆದು ಸಲ್ಲಿಸಲು ನಿಯಮ ರೂಪಿಸಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಮಾತನಾಡಿ, ಜಿಲ್ಲೆಯಲ್ಲಿ ತಾಲ್ಲೂಕುವಾರು ನಿಗದಿಪಡಿಸಿದ ಅನುದಾನವನ್ನು ಕ್ಷೇತ್ರವಾರು ಮರುಹಂಚಿಕೆ ಮಾಡಲಾಗಿದೆ. ಶಾಸಕರು ಪ್ರತ್ಯೇಕ ಕ್ಷೇತ್ರವಾರು ಮೈಕ್ರೋ ಯೋಜನೆಯಡಿಯಲ್ಲಿ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಶೀಘ್ರ ಸಲ್ಲಿಸಬೇಕು’ ಎಂದು ತಿಳಿಸಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ರಹೀಂ ಖಾನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕ ಪ್ರಭು ಚವಾಣ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT