ಬೀದರ್: ಅಲ್ಲಮಪ್ರಭು ಪತ್ತಿನ ಸಹಕಾರ ಸಂಘದ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಸೆ.16ರಂದು ಬೆಳಿಗ್ಗೆ 11.15ಕ್ಕೆ ನಗರದ ಗುಂಪಾ ರಸ್ತೆಯಲ್ಲಿನ ಕರ್ನಾಟಕ ಫಾರ್ಮಸಿ ಕಾಲೇಜು ಎದುರಿನ ಕೆ.ಆರ್.ಇ. ಸಂಸ್ಥೆಯ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ ಅಧ್ಯಕ್ಷತೆ ವಹಿಸುವರು. ಪೌರಾಡಳಿತ ಸಚಿವ ರಹೀಂ ಖಾನ್, ಸಂಸದ ಸಾಗರ್ ಖಂಡ್ರೆ ಮತ್ತಿತರರು ಪಾಲ್ಗೊಳ್ಳುವರು ಎಂದು ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ ಸ್ವಾಮಿ ತಿಳಿಸಿದ್ದಾರೆ.