ಬೀದರ್: ಅಹಿಂದ ಚಳವಳಿಯ 25ನೇ ವರ್ಷದ ಸಂಭ್ರಮದ ಪ್ರಯುಕ್ತ ಹೋರಾಟ-ಸಾಧನೆ-ಸಂಕಲ್ಪ ಘೋಷವಾಕ್ಯದಡಿ ಏ.26 ರಂದು ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿನ ಲೋಟಸ್ ಗಾರ್ಡನ್ನಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅಹಿಂದ ಒಕ್ಕೂಟದ ರಾಜ್ಯ ಸಹ ಸಂಚಾಲಕ ಅನಿಲಕುಮಾರ ಬೆಲ್ದಾರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನ ಪರಿಷತ್ ಸಚೇತಕ ಸಲೀಂ ಅಹಮ್ಮದ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದರು.

‘ಅಹಿಂದ ಚಳವಳಿ 25 ವರ್ಷಗಳಿಂದ ಸಮುದಾಯಗಳಿಗೆ ಶಕ್ತಿ ನೀಡುತ್ತಿದೆ. ಸದ್ಯದ ಹೊಸ ಸವಾಲು ಎದುರಿಸುವ ಸಂಕಲ್ಪ ಮಾಡುವುದು ಹಾಗೂ ಸಮುದಾಯಗಳ ಐಕ್ಯತೆ ಇನ್ನಷ್ಟು ಬಲಪಡಿಸುವುದು ವಿಚಾರ ಸಂಕಿರಣ ಆಯೋಜನೆಯ ಉದ್ದೇಶವಾಗಿದೆ’ ಎಂದರು.

ರಾಜ್ಯದಲ್ಲಿ ಅಹಿಂದ ಸಮುದಾಯಗಳ ಏಳಿಗೆಗೆ ಶ್ರಮಿಸಿದ ಶರಣರು, ದಾಸರು, ತತ್ವ ಪದಕಾರರು, ದಾರ್ಶನಿಕರು, ರಾಜಕಾರಣಿಗಳ ಕೊಡುಗೆಯನ್ನು ಸ್ಮರಿಸಲಾಗುವುದು ಎಂದು ತಿಳಿಸಿದರು.

ವಿಚಾರ ಸಂಕಿರಣದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ತುಕಾರಾಮ ಚಿಮಕೋಡೆ, ಒಬಿಸಿ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ತಾನಾಜಿ ಸಗರ್, ಕಾರ್ಯದರ್ಶಿ ರಾಜಕುಮಾರ ಟಿಳೆಕರ್, ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪತರಾವ್ ದೀನೆ, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ನಾಟೇಕರ್, ಒಬಿಸಿ ಮೋರ್ಚಾ ರಾಜ್ಯ ಸಲಹೆಗಾರ ಸಿದ್ದು ಫುಲಾರಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-2008582783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.