ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಗಾರ ಮಾದಯ್ಯ ಜಯಂತಿ ಆಚರಣೆ

Last Updated 4 ಸೆಪ್ಟೆಂಬರ್ 2020, 12:50 IST
ಅಕ್ಷರ ಗಾತ್ರ

ಬಸವಕಲ್ಯಾಣ: ಇಲ್ಲಿನ ಅನುಭವ ಮಂಟಪದಲ್ಲಿ ಈಚೆಗೆ ಶರಣ ಹೂಗಾರ ಮಾದಯ್ಯನವರ ಜಯಂತಿ ಆಚರಿಸಲಾಯಿತು.

ಶಿವಾನಂದ ದೇವರು ಭಾವಚಿತ್ರದ ಪೂಜೆ ನೆರವೇರಿಸಿ ಮಾತನಾಡಿ, ‘ಸಮಾಜದಲ್ಲಿ ಸಾಮರಸ್ಯದಿಂದ ಬದುಕಲು ಹೂವು ಪೂಣಿಸಿದ ದಾರದಂತೆ ಬಾಳಬೇಕು. ಸಹನೆ, ತಾಳ್ಮೆ ಇರಬೇಕು. ಶರಣ ಹೂಗಾರ ಮಾದಯ್ಯನವರು 12 ನೇ ಶತಮಾನದಲ್ಲಿ ಬಸವಣ್ಣನವರ ಜತೆಗೂಡಿ ಶರಣರಿಗೆ ಹೂವು ಪೂರೈಸುವ ಕಾಯಕ ಕೈಗೊಂಡಿದ್ದರು’ ಎಂದರು.

ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಿವಶರಣಪ್ಪ ಹೂಗಾರ, ವಚನ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕಲ್ಯಾಣರಾವ್ ಮದರಗಾಂವಕರ್ ಮಾತನಾಡಿದರು.

ಹೂಗಾರ ಸಮಾಜ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಠಲ್ ಹೂಗಾರ, ಲಕ್ಷ್ಮಿಬಾಯಿ ಪಾಟೀಲ, ಸಂಗೀತಗಾರ ರಾಜಕುಮಾರ ಹೂಗಾರ ಮದಕಟ್ಟಿ, ಸಂಜೀವಕುಮಾರ ಹೂಗಾರ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT