ಹುಲಸೂರ: ‘ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಏಪ್ರಿಲ್ 20ರಂದು ತಾಲ್ಲೂಕು ಆಡಳಿತದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಹಶೀಲ್ದಾರ್ ಶಿವಾನಂದ ಮೆತ್ರೆ ತಿಳಿಸಿದ್ದಾರೆ.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಮಹಾನ್ ಪುರುಷರ ಜಯಂತಿಗಳನ್ನು ತಾಲೂಕು ಆಡಳಿತದಿಂದ ಆಚರಿಸುವ ಪರಂಪರೆ ಮುಂದುವರಿಯಲಿದೆ. ತಾಲೂಕು ವ್ಯಾಪ್ತಿಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಜಯಂತಿಯನ್ನು ಆಚರಿಸಲು ಸೂಚನೆ ನೀಡಲಾಗುವುದು. ತಾಲೂಕು ಕೇಂದ್ರದಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು’ ಎಂದು ತಿಳಿಸಿದರು.

‘ಅದೇ ದಿನ ಬೆಳಿಗ್ಗೆ 9 ಗಂಟೆಗೆ ಅಲ್ಲಮಪ್ರಭು ಶೂನ್ಯ ಪೀಠದಿಂದ ಬಸವಣ್ಣನವರ ಪ್ರತಿಮೆಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗುವ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬಸವೇಶ್ವರ ವೃತ್ತದಲ್ಲಿ ಸಮಾಪ್ತಿಯಾಗಲಿದೆ’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷೆ ಲತಾ ಹಾರಕುಡೆ, ಜಿ.ಪಂ ಮಾಜಿ ಸದಸ್ಯ ಸುಧೀರ ಕಾಡಾದಿ ಹಾಗೂ ತಾ.ಪಂ ಮಾಜಿ ಸದಸ್ಯ ಗೋವಿಂದರಾವ ಸೋಮವಂಶಿ ಅವರು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದರು.

ತಾ.ಪಂ ಇಒ ಮಹಾದೇವ ಜಮ್ಮು, ಉಪತಹಶೀಲ್ದಾರ್ ಸುನೀಲಕುಮಾರ ಸಜ್ಜನಶೆಟ್ಟಿ, ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಪ್ರವೀಣ ಕಾಡಾದಿ, ಬಸವಕೇಂದ್ರ ತಾಲೂಕು ಅಧ್ಯಕ್ಷ ಆಕಾಶ ಖಂಡಾಳೆ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-33-318007579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.