ಹುಲಸೂರ: ಪಟ್ಟಣದಲ್ಲಿ ಬುಧವಾರ ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಪಟ್ಟಣದ ಮೊಮೀನ್ ಮೊಹಲ್ಲಾ ವಾರ್ಡ್ ಸಂಖ್ಯೆ–3ರ ನಿವಾಸಿ ಅರ್ಷದ್ ಅಲಿ ಮೊಮೀನ ಪುತ್ರ ಅಲಿ ಮೊಮೀನ್ (8) ಮೃತ ಬಾಲಕ. ಮಳೆಯ ಸಂದರ್ಭ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಬಾಲಕನನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು.

ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಶಿವಾನಂದ ಮೆತ್ರೆ, ದುರ್ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿದರು. ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ ದೊರೆಯುವ ಪರಿಹಾರ ಮತ್ತು ನೆರವು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಣಪತಿ ಮೈನಾಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖೆಯಿಂದ ಲಭ್ಯವಿರುವ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ತಾ. ಪಂ. ಇಒ ಮಹಾದೇವ ಜಮ್ಮು, ಸಿಪಿಐ ಅಲಿಸಾಬ್, ಕಂದಾಯ ನಿರೀಕ್ಷಕ ಶರಣು ಪವಡಶೆಟ್ಟಿ ಹಾಗೂ ವೈದ್ಯಾಧಿಕಾರಿ ಶಶಿಕಾಂತ ಕನಡೆ ಉಪಸ್ಥಿತರಿದ್ದರು.

ಈ ಸಂಬಂಧ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1493373746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.