ಹುಲಸೂರ: ‘ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೂಲಸೌಕರ್ಯ ವೃದ್ಧಿ ಅಗತ್ಯವಾಗಿದ್ದು, ಗ್ರಾಮಸ್ಥರ ಬಹುಕಾಲದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ’ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಹೇಳಿದರು.

ತಾಲ್ಲೂಕಿನ ಕೋಟಮಾಳ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೋಟಮಾಳ ಗ್ರಾಮದಿಂದ ಮಹಾರಾಷ್ಟ್ರ ಗಡಿಯವರೆಗೆ ಸುಮಾರು ₹4.50 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಡಾಂಬರೀಕರಣ, ಕೆಕೆಆರ್ಡಿಬಿ ಅನುದಾನದಲ್ಲಿ ₹40 ಲಕ್ಷ ವೆಚ್ಚದಲ್ಲಿ ಗ್ರಾಮದ ಸಿ.ಸಿ. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರಾಜಿ ಇಲ್ಲದೆ ಗುಣಮಟ್ಟ ಕಾಪಾಡಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ’ ಎಂದರು.

‘ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಪ್ರತಿದಿನ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಅನೇಕ ಹಳ್ಳಿಗಳಲ್ಲಿ ರೈತರಿಗೆ ಹೊಲಗಳಿಗೆ ತೆರಳಲು ಸಮರ್ಪಕ ರಸ್ತೆ ಸೌಲಭ್ಯ ಇಲ್ಲದಿರುವುದು ಹಾಗೂ ವಿದ್ಯುತ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ವಿಧಾನಸಭೆಯಲ್ಲಿಯೂ ರೈತರ ಪರವಾಗಿ ಧ್ವನಿ ಎತ್ತಿದ್ದೇನೆ’ ಎಂದರು.

‘ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕೆಕೆಆರ್ಡಿಬಿ ಅನುದಾನದಲ್ಲಿ ಆಗಸ್ಟ್ ತಿಂಗಳಲ್ಲಿ ಕೋಟಮಾಳದಿಂದ ಮಿರಖಲ್ವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೂ ಚಾಲನೆ ನೀಡಲಾಗುವುದು’ ಎಂದು ತಿಳಿಸಿದರು.

ಪ್ರಮುಖರಾದ ಓಂ ಪಾಟೀಲ, ಪ್ರದೀಪ್ ಗಡವಂತೆ, ಶಿವರಾಜ ನರಶೆಟ್ಟಿ, ಶಿವಾಜಿ ಪಾಟೀಲ, ಭಿಕಾಜಿ ಶಿಂದೆ, ಭೀಮರಾವ್ ಶಿಂದೆ, ಮಾರುತಿ ಪಾಟೀಲ, ವೆಂಕಟ್ ಶಿಂದೆ, ಕಲ್ಯಾಣರಾವ್ ಕುಲಕರ್ಣಿ, ಅರ್ಜುನ್ ಲಂಬೆ, ನಾಗೇಶ್ ಮದನೇ, ಸತ್ಯವಾನ್ ಶಿಂದೆ, ರಾಜಪ್ಪ ಹಲಿಂಗೆ, ಮಾದವ ಬಿರಾದಾರ, ಸುನಿಲ್ ಪಾಟೀಲ, ಪ್ರಶಾಂತ್ ಬಿರಾದಾರ, ದೀಪಕ್ ತೆಲಂಗ, ದತ್ತ ಶಿಂದೆ, ವೆಂಕಟ್ ಲಂಬೆ, ವಸಂತ್ ಶಿಂದೆ, ಮನೋಹರ್ ಚೀತಲೇ, ಗುಂಡೆರಾವ್ ಭೋಸಲೇ, ಮಹದೇವ್ ಯವಲೇ, ಹಂಶರಾಜ್ ಶಿಂದೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-33-1898528153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.