ಹುಲಸೂರ: ತಾಲ್ಲೂಕು ಕೇಂದ್ರ ಎಂದು ಘೋಷಣೆಯಾಗಿ ಎಂಟು ವರ್ಷ ಕಳೆದರೂ, ಸಮರ್ಪಕ ಮೂಲಸೌಕರ್ಯಗಳಿಂದ ವಂಚಿತವಾಗಿರುವ ಪಟ್ಟಣದಲ್ಲಿ ಇದೀಗ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೊಂದಲ ಉಂಟಾಗಿದೆ. ಸರ್ಕಾರದಿಂದ ಅನುಮೋದನೆ ಸಿಕ್ಕು ಭೂಮಿಪೂಜೆ ನಡೆದ ಜಾಗ ಬಿಟ್ಟು ಹೊಸ ಸ್ಥಳ ಪರಿಶೀಲನೆ ನಡೆಸಿರುವುದು ಸಾರ್ವಜನಿಕರು ಹಾಗೂ ಭೂದಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

2025ರ ಜನವರಿ 24ರಂದು ಪ್ರಜಾಸೌಧ ನಿರ್ಮಾಣಕ್ಕೆ ₹8.60 ಕೋಟಿ ಅನುದಾನ ಮಂಜೂರಾದ ಕುರಿತು ಅಧಿಕೃತವಾಗಿ ಘೋಷಿಸಲಾಗಿತ್ತು. ಪ್ರಜಾಸೌಧ ನಿರ್ಮಾಣಕ್ಕಾಗಿ ಗುರುತಿಸಲಾದ ಜಾಗಕ್ಕೆ ಆಗಿನ ಸಹಾಯಕ ಆಯುಕ್ತ ಮುಕುಲ್ ಜೈನ್, ತಹಶೀಲ್ದಾರ್ ಶಿವಣ್ಣ ಮೇತ್ರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಬಳಿಕ ಅದೇ ಜಾಗದಲ್ಲಿ ಭೂಮಿ ಪೂಜೆ ನೆರವೇರಿಸಲಾಗಿತ್ತು. ಬಳಿಕ ಅದೇ ವರ್ಷ ಡಿಸೆಂಬರ್ 2ರಂದು ಸಚಿವ ಈಶ್ವರ ಖಂಡ್ರೆ ಅವರು ಬೀದರ್–ಲಾತೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜಾಗದಲ್ಲಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.

ಪ್ರಜಾಸೌಧ ನಿರ್ಮಾಣಕ್ಕೆ ಭೋಪಳೆ ಕುಟುಂಬದವರು ಸ.ನಂ. 359/378ರಲ್ಲಿ 9.09 ಎಕರೆ ಜಮೀನನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಗೆ ಭೂದಾನ ಮಾಡಿದ್ದರು. ಸರ್ಕಾರವು ಪಹಣಿಯಲ್ಲಿಯೂ ‘ಮಿನಿ ವಿಧಾನಸೌಧ (ತಾಲ್ಲೂಕು ಸಂಕೀರ್ಣ)’ ನಿರ್ಮಾಣಕ್ಕೆ ಜಾಗ ಮಂಜೂರಾಗಿದೆ ಎಂದು ದಾಖಲಿಸಿತ್ತು. ಕಂದಾಯ ಇಲಾಖೆ ಹಾಗೂ ಕೆಕೆಆರ್ಡಿಬಿಯಿಂದ ತಲಾ ₹4.30 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು.

ಆದರೆ ಇತ್ತೀಚೆಗೆ ಬಸವಕಲ್ಯಾಣ ರಸ್ತೆಯ ಸಾಯಿಬಾಬಾ ದೇವಸ್ಥಾನದ ಎದುರಿನ ಪ್ರದೇಶವನ್ನು ಪ್ರಜಾಸೌಧ ನಿರ್ಮಾಣಕ್ಕಾಗಿ ಅಧಿಕಾರಿಗಳು ಪರಿಶೀಲಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಭೂಮಿಪೂಜೆ ನಡೆದ ಜಾಗವನ್ನು ಬಿಟ್ಟು ಮತ್ತೊಂದು ಸ್ಥಳ ಪರಿಶೀಲನೆ ನಡೆಸುತ್ತಿರುವುದರಿಂದ ಮೊದಲು ಆಯ್ಕೆ ಮಾಡಿದ್ದ ಜಾಗದ ಗತಿ ಏನು? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಜಮೀನು ದಾನ ಮಾಡಿದ್ದ ದೇವೇಂದ್ರ ಭೋಪಳೆ ಸೇರಿದಂತೆ ಕುಟುಂಬದವರು ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿದ್ದು, ಸರ್ಕಾರ ತಮಗೆ ನ್ಯಾಯ ಒದಗಿಸಬೇಕು ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಸರ್ಕಾರ ಗುರುತಿಸಿದ ಜಾಗವನ್ನು ಬಿಟ್ಟು ಹೊಸ ಜಾಗದ ಹುಡುಕಾಟ ನಡೆಸುತ್ತಿರುವುದು ಕೆಲವರ ರಾಜಕೀಯ ವರ್ಚಸ್ಸು ಹೆಚ್ಚಿಸಿಕೊಳ್ಳುವ ಪ್ರಯತ್ನವೇ ಹೊರತು ಅಭಿವೃದ್ಧಿಯ ಉದ್ದೇಶವಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ತಾಲ್ಲೂಕಿನ ಬಹುತೇಕ ಸರ್ಕಾರಿ ಕಚೇರಿಗಳು ಇನ್ನೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಜಾಸೌಧ ನಿರ್ಮಾಣವಾದರೆ ಒಂದೇ ಸೂರಿನಡಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಜನರಲ್ಲಿತ್ತು. ಆದರೆ ಜಾಗದ ಆಯ್ಕೆ ವಿಚಾರದಲ್ಲಿನ ಗೊಂದಲದಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಆತಂಕ ಎದುರಾಗಿದೆ.

ಇತ್ತೀಚೆಗೆ ಶಹಾಪುರ ತಾಲ್ಲೂಕಿನಲ್ಲಿಯೂ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದ ಜಾಗ ವಿವಾದ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲಿಯೂ ಸರ್ಕಾರ ಈಗಾಗಲೇ ಗುರುತಿಸಿದ ಜಾಗದಲ್ಲೇ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ. ಇದೇ ರೀತಿಯಲ್ಲಿ ಹುಲಸೂರಲ್ಲಿಯೂ ಭೂಮಿಪೂಜೆ ನಡೆದ ಜಾಗದಲ್ಲೇ ಕಾಮಗಾರಿ ಆರಂಭಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-1666768033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.