ಹುಲಸೂರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕುಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ತಾ.ಪಂ ಆಡಳಿತಾಧಿಕಾರಿ ರಜನಿಕಾಂತ್ ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್ ಚವ್ಹಾಣ್,‘ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ, ನಿರ್ಲಕ್ಷ್ಯ ಕಂಡುಬ ರಬಾರದು. ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಪ್ರತಿಯೊಂದು ಇಲಾಖೆ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಮೂಲ ಸೌಕರ್ಯ ಮತ್ತು ಕಲ್ಯಾಣ ಯೋಜನೆಗಳು ತ್ವರಿತವಾಗಿ ತಲುಪಿಸಲು ಇಲಾಖೆಗಳ ಮಧ್ಯೆ ಸಮನ್ವಯ ಅಗತ್ಯ ಎಂದು ತಿಳಿಸಿದರು.

ಕೃಷಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಬಾಕಿ ಉಳಿದಿರುವ ಯೋಜನೆಗಳು ಮತ್ತು ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ವೇಗ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಹಶೀಲ್ದಾರ್ ಶಿವಾನಂದ ಮೇತ್ರೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಸಹಾಯಕ ಕೃಷಿ ನಿರ್ದೇಶಕ ಗೌತಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿಲೀಪ್ ಉತ್ತಮ ಹಾಗೂ ಜೆಸ್ಕಾಂ ಎಇಇ ಗಣಪತಿ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-33-1529862162

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.