ಹುಲಸೂರ: ‘ಮಂದಿರಗಳಲ್ಲಿ ಹಾಗೂ ಸಾರ್ವಜನಿಕ ಬಾವಿಗಳ ನೀರು ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಅಡ್ಡಿಪಡಿಸುವುದು ಕಾನೂನು ಬಾಹಿರವಾಗಿರುತ್ತದೆ’ ಎಂದು ತಹಶೀಲ್ದಾರ್ ಶಿವಾನಂದ ಮೆತ್ರೆ ತಿಳಿಸಿದರು.

ತಾಲ್ಲೂಕಿನ ಕಾದೆಪೂರ ಗ್ರಾಮದಲ್ಲಿ ಉಜ್ವಲ್ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ವರ್ಗದ ಆಧಾರದ ಮೇಲೆ ನಿರ್ಬಂಧ ಹೇರಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚಿನ ಆಸಕ್ತಿ ತೋರಬೇಕು’ ಎಂದು ಪಿಎಸ್ಐ ನಾಗೇಂದ್ರ ತಿಳಿಸಿದರು.

ಪಬ್ಲಿಕ್ ಪ್ರಾಸಿಕ್ಯೂಟರ್ ಬಸವಂತ ರೆಡ್ಡಿ ಮಾತನಾಡಿ, ‘ಕಾನೂನು ತುಂಬಾ ಸೂಕ್ಷ್ಮವಾಗಿದ್ದು, ಅದನ್ನು ಅರಿತುಕೊಳ್ಳಬೇಕು. ಪಾಲಕರು ತಮ್ಮ ವಾಹನಗಳನ್ನು ಚಿಕ್ಕ ಮಕ್ಕಳಿಗೆ ಚಲಾಯಿಸಲು ನೀಡುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ಪಾಲಕರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಹೇಳಿದರು.

ಗ್ರಾ.ಪಂ.ಅಧ್ಯಕ್ಷೆ ಸೋನಿಯಾ ಸಿದ್ಧಾರೂಢ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಜ್ವಲ್ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಅಧ್ಯಕ್ಷ ನಿರೂಪಿಸಿದರು. ಸಂದೀಪ, ರವಿ, ಪ್ರಶಾಂತ ಸೇರಿದಂತೆ ಗ್ರಾಮದ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.