ಹುಲಸೂರ: ತಾಲ್ಲೂಕಿನಲ್ಲಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಹಿರಿಯ ನ್ಯಾಯಾಧೀಶರು ಬುಧವಾರ ವಿವಿಧ ಕಟ್ಟಡಗಳನ್ನು ಪರಿಶೀಲಿಸಿದರು.

ಬೆಂಗಳೂರು ಹೈಕೋರ್ಟ್ ನಿರ್ದೇಶನ ಹಾಗೂ ಬೀದರ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಸೂಚನೆಯಂತೆ ಬಸವಕಲ್ಯಾಣದ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ಹುಲಸೂರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಪಿಎಂಸಿ ಕಟ್ಟಡ ಹಾಗೂ ಬುದ್ಧ ವಿಹಾರದ ಸಮೀಪದ ಖಾಸಗಿ ಕಟ್ಟಡವನ್ನು ವೀಕ್ಷಿಸಿದರು.

ನ್ಯಾಯಾಲಯ ಮತ್ತು ನ್ಯಾಯಾಧೀಶರ ವಸತಿ ಸೌಲಭ್ಯಗಳಿಗಾಗಿ ಈ ಕಟ್ಟಡಗಳ ಲಭ್ಯತೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಮೂರು ಸ್ಥಳಗಳೂ ನ್ಯಾಯಾಲಯ ಆರಂಭಿಸಲು ಸೂಕ್ತವಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಾನಂದ ಮೆತ್ರೆ, ತಾಲ್ಲೂಕ ಪಂಚಾಯಿತಿ ಇಒ ಮಹಾದೇವ ಜಮ್ಮು, ಕಂದಾಯ ನಿರೀಕ್ಷಕ ಶರಣು ಪವಾಡಶೆಟ್ಟಿ, ನ್ಯಾಯಾಲಯ ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1951839186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.