ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಸೂರ ಗ್ರಾಮ ಪಂಚಾಯಿತಿ ವತಿಯಿಂದ ಐತಿಹಾಸಿಕ ಕಲ್ಯಾಣಿ ಪುನಃಶ್ಚೇತನ

ಹುಲಸೂರ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ಕೆಲಸ
Last Updated 17 ಮೇ 2022, 11:08 IST
ಅಕ್ಷರ ಗಾತ್ರ

ಹುಲಸೂರ: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ಐತಿಹಾಸಿಕ ಕಲ್ಯಾಣಿ ಪುನಃಶ್ಚೇತನ ಕಾರ್ಯ ನಡೆಯುತ್ತಿದೆ.

‘ಐತಿಹಾಸಿಕ ಕಲ್ಯಾಣಿಗಳು ತ್ಯಾಜ್ಯ ಸಂಗ್ರಹ ತೊಟ್ಟಿಗಳಾಗಿ ಮಾರ್ಪಟ್ಟಿವೆ. ಕಲ್ಯಾಣಿಗಳನ್ನು ಅಭಿವೃದ್ಧಿಗೊಳಿಸಬೇಕು ಎನ್ನುವ ಸರ್ಕಾರದ ನಿರ್ಧಾರದ ಕಾರಣಕ್ಕೆ ಪಟ್ಟಣದ ಮಹಾದೇವ ದೇಗುಲದ ಪಕ್ಕದಲ್ಲಿರುವ ಕಲ್ಯಾಣಿ ಸ್ವಚ್ಛಗೊಳಿಸಿ ಅದನ್ನು ಪುನಃಶ್ಚೇತನಗೊಳಿಸಲು ಮುಂದಾಗಿದ್ದೇವೆ. ಕಾರ್ಯ ಪ್ರಗತಿಯಲ್ಲಿದೆ’ ಎಂದು ಹುಲಸೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೀಮಶೆಪ್ಪ ದಂಡಿನ್ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿ,‘ಕಲ್ಯಾಣಿ ಸ್ವಚ್ಛಗೊಳಿಸಬೇಕು ಎನ್ನುವುದು ಸ್ಥಳೀಯರ ಬಹುದಿನದ ಬೇಡಿಕೆಯಾಗಿತ್ತು. ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆದು ಕಲ್ಯಾಣಿ ಜೀರ್ಣೊದ್ಧಾರ ಕಾರ್ಯವನ್ನು ಆರಂಭಿಸಲಾಗಿದೆ. ಇದು ಹೂಳೆತ್ತುವುದು, ಸ್ವಚ್ಛತೆ ಹಾಗೂ ಸೌಂದರ್ಯಿಕರಣ, ಬೇಲಿ ಅಳವಡಿಕೆಯನ್ನೂ ಒಳಗೊಂಡಿದೆ. ಕಲ್ಯಾಣಿ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ಹೆಚ್ಚಳ, ಸುತ್ತಲಿನ ಪ್ರದೇಶದಲ್ಲಿ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ನರೇಗಾ ಐಇಸಿ ಸಂಯೋಜಕ ಗಣಪತಿ ಹರಕೂಡೆ ಹಾಗೂ ಸ್ಥಳೀಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT