ಹುಲಸೂರ : ‘ತಾಲ್ಲೂಕಿನ ಗೋರಟಾ (ಬಿ) ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಏಪ್ರಿಲ್ 2 ಮತ್ತು 3 ರಂದು ಜಗನ್ಮಾತೆ ಅಕ್ಕ ಮಹಾದೇವಿ ಜಯಂತೋತ್ಸವ ಹಾಗೂ ವಚನ ವಿಜಯೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಗುತ್ತಿದೆ’ ಎಂದು ಮಠದ ಪೀಠಾಧಿಪತಿ ಪ್ರಭುದೇವ ಸ್ವಾಮೀಜಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಕನ ಜಯಂತ್ಯುತ್ಸವದ ಮೂಲಕ ಬಸವಾದಿ ಶರಣರ ಮಾನವೀಯ ಮೌಲ್ಯಗಳನ್ನು ಜನಮನದಲ್ಲಿ ಬಿತ್ತುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 1ರವರೆಗೆ ಎಂಟು ದಿನಗಳ ಕಾಲ ‘ಅಕ್ಕನ ದರ್ಶನ ಪ್ರವಚನ’ ನಡೆಯುತ್ತಿದೆ’ ಎಂದು ತಿಳಿಸಿದರು.

‘ಏಪ್ರಿಲ್ 2ರಂದು ಸಂಜೆ 6 ಗಂಟೆಗೆ ಅಕ್ಕನ ತೊಟ್ಟಿಲು ವಿಶೇಷ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಏಪ್ರಿಲ್ 3ರಂದು ಸಂಜೆ 4 ಗಂಟೆಗೆ ವಚನ ವಿಜಯೋತ್ಸವದ ಭವ್ಯ ಮೆರವಣಿಗೆ ನಡೆಯಲಿದೆ. ಅಲಂಕೃತ ವಾಹನದಲ್ಲಿ ವಿಶ್ವಗುರು ಬಸವಣ್ಣ ಹಾಗೂ ಮಹಾದೇವಿಯಕ್ಕನವರ ಭಾವಚಿತ್ರಗಳನ್ನು ಇರಿಸಿ ವಚನ ಸಾಹಿತ್ಯದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಸಂಜೆ 6 ಗಂಟೆಗೆ 770 ಸಮವಸ್ತ್ರಧಾರಿ ಶರಣ–ಶರಣೆಯರಿಂದ ಅಕ್ಕನ ಯೋಗಾಂಗ ತ್ರಿವಿಧಿ ಸಾಮೂಹಿಕ ಪಾರಾಯಣ ನಡೆಯಲಿದೆ. ನಂತರ ವಚನ ನೃತ್ಯರೂಪಕ ಪ್ರದರ್ಶನ ನಡೆಯಲಿದೆ’ ಎಂದರು.

‘ಅನುಭವ ಗೋಷ್ಠಿಗೆ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಅನೇಕ ಸ್ವಾಮೀಜಿಗಳು ಪಾಲ್ಗೊಳುವವರು. ಅಲ್ಲದೆ ಸಚಿವ ಈಶ್ವರ ಬಿ. ಖಂಡ್ರೆ, ಶಾಸಕ ಶರಣು ಸಲಗರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವವರು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-1575474661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.