ಹುಲಸೂರ: ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ನಡೆಯುತ್ತಿರುವ ಸಿದ್ದರಾಮೇಶ್ವರ ದೇವಾಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಅಳವಡಿಸಿದ್ದ ಶರಣರ ಭಾವಚಿತ್ರಗಳಿರುವ ಬ್ಯಾನರ್ಗಳನ್ನು ಕಿಡಿಗೇಡಿಗಳು ಹರಿದ ಘಟನೆಗೆ ಬಸವಾಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶತಮಾನ ಗಳಿಂದ ಆಚರಿಸಲಾಗುತ್ತಿರುವ ಈ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, 15 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಬಸವಣ್ಣ ಹಾಗೂ ಸಿದ್ದರಾಮೇಶ್ವರರ ಭಾವಚಿತ್ರಗಳಿರುವ ಸುಮಾರು 50ರಿಂದ 60 ಬ್ಯಾನರ್ಗಳನ್ನು ಗ್ರಾಮದೆಲ್ಲೆಡೆ ಅಳವಡಿಸಲಾಗಿತ್ತು.

ಗುರುವಾರ ಬೆಳಗಿನ ಜಾವ ಕೆಲ ಕಿಡಿಗೇಡಿಗಳು ಈ ಬ್ಯಾನರ್ಗಳನ್ನು ಹರಿದು ವಿರೂಪಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಇದೇ ರೀತಿಯ ಘಟನೆಗಳು ಕಳೆದ ಎರಡು-ಮೂರು ವರ್ಷಗಳಿಂದ ಮರುಕಳಿಸುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿ ಸಾವಿರಾರು ಭಕ್ತರು ಶರಣರ ಭಾವಚಿತ್ರಗಳಿರುವ ಧ್ವಜಗಳನ್ನು ಹಿಡಿದು ಗ್ರಾಮದಲ್ಲಿನ ಓಣಿಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ ಮೆಂಡೋಳೆ, ಸದಸ್ಯರು ಹಾಗೂ ಗ್ರಾಮಸ್ಥರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವಿವಾದ ಹಿನ್ನೆಲೆ : ಸಿದ್ದರಾಮೇಶ್ವರರು 12ನೇ ಶತಮಾನದ ಶರಣರೆಂಬ ಅಭಿಪ್ರಾಯವನ್ನು ದೇವಸ್ಥಾನ ಸಮಿತಿ ಹಾಗೂ ಬಹುತೇಕ ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೆಲವರು ಅವರು ಶರಣರಲ್ಲ, ರೇವಣ್ಣಸಿದ್ದೇಶ್ವರ ಎಂದು ವಾದಿಸುತ್ತಿರುವುದೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ಕಳೆದ ವರ್ಷದ ಜಾತ್ರಾ ಮಹೋತ್ಸವದಲ್ಲಿಹಾರಕೂಡ ಹೀರೆಮಠ ಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವ ಸಂದರ್ಭದಲ್ಲಿ, ಬೇಲೂರು ಗ್ರಾಮದ ಕೆರೆ ಪಕ್ಕದಲ್ಲಿರುವ ದೇವಸ್ಥಾನವು 12ನೇ ಶತಮಾನದ ಸೊನ್ನಲಿಗೆಯ ಸಿದ್ದರಾಮರದ್ದೇ ಎಂದು ಸ್ಪಷ್ಟಪಡಿಸಿದ್ದರು ಎಂದು ಭಕ್ತರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಂದಾಗಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-33-505686186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.