‘ವಿದ್ಯುತ್ ಚಿತಾಗಾರ ಕಲ್ಪಿಸಿ’
‘ಪಟ್ಟಣದ ಸ್ಮಶಾನಗಳಿಗೆ ವಿದ್ಯುತ್ ಚಿತಾಗಾರ ಸೌಲಭ್ಯ ಕಲ್ಪಿಸಬೇಕು. ಸ್ಮಶಾನಗಳ ನಿರ್ವಹಣೆಗೆ ಸಿಬ್ಬಂದಿ ನೇಮಕ ಮಾಡಬೇಕು. ಅಗತ್ಯ ಮೂಲಸೌಲಭ್ಯಗಳ ಜೊತೆಗೆ ಕಾಂಪೌಂಡ್ ನಿರ್ಮಿಸಬೇಕು. ಎಲ್ಲ ಸ್ಮಶಾನಗಳನ್ನು ಸ್ವಚ್ಛಗೊಳಿಸಿ ಹೂವು ಹಾಗೂ ಹಣ್ಣಿನ ಗಿಡ–ಮರಗಳನ್ನು ಬೆಳೆಸಬೇಕು. ಇದರಿಂದ ಇಲ್ಲಿನ ಪರಿಸರದ ಅಂದವೂ ಹೆಚ್ಚಲಿದೆ’ ಎನ್ನುತ್ತಾರೆ ಗ್ರಾಮಸ್ಥ ರಮೇಶ ಭೋಪಳೆ. ಸೌಲಭ್ಯ ಒದಗಿಸಲು ಸಂಸ್ಥೆಗಳು ಮುಂಬರಲಿ: ಹಿಂದುಳಿದ ತಾಲ್ಲೂಕಿನಲ್ಲಿ ಸ್ಮಶಾನ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರೋಟರಿ ಸಂಸ್ಥೆ ಹೀಗೆ ಹಲವು ಸಂಘ ಸಂಸ್ಥೆಗಳು ಮುಂಬರಲಿ ಎಂದು ಸಾರ್ವಜನಿಕರು ಆಶಯ ವ್ಯಕ್ತಪಡಿಸಿದ್ದಾರೆ.