ಹುಲಸೂರ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಅಕಾಲಿಕವಾಗಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದ ಹಿಂಗಾರು ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ಘೋಷಿಸುವಂತೆ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಘಟಕದ ಪದಾಧಿಕಾರಿಗಳು ಬಸವಕಲ್ಯಾಣ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

‘ಹುಲಸೂರ ಮತ್ತು ಬಸವಕಲ್ಯಾಣ ತಾಲ್ಲೂಕು ವ್ಯಾಪ್ತಿಯ ಹಲವಾರು ಗ್ರಾಮಗಳಲ್ಲಿ ಏಕಾಏಕಿ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದ ಕೊಯ್ಲಿಗೆ ಸಿದ್ಧವಾಗಿದ್ದ ಹಿಂಗಾರು ಬೆಳೆಗಳು ಹಾನಿಗೊಳಗಾಗಿವೆ. ಬಿಳಿ ಜೋಳ, ಕುಸುಬೆ, ಚಿಯಾ ಸೇರಿದಂತೆ ಹಲವು ಬೆಳೆಗಳು ಹೊಲದಲ್ಲೇ ಉರುಳಿಬಿದ್ದು, ರಾಶಿಯಾಗದೇ ನಾಶವಾಗಿವೆ. ಇದರಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಇದಲ್ಲದೆ ತೋಟಗಾರಿಕೆ ಬೆಳೆಗಳಾದ ಮಾವು, ತರಕಾರಿ ಹಾಗೂ ಇತರ ಬೆಳೆಗಳಿಗೂ ಹಾನಿಯಾಗಿದ್ದು, ಈಗಾಗಲೇ ಹವಾಮಾನ ವೈಪರಿತ್ಯದಿಂದ ಸಂಕಷ್ಟದಲ್ಲಿರುವ ರೈತರು ಮತ್ತಷ್ಟು ಆರ್ಥಿಕ ಒತ್ತಡಕ್ಕೆ ಸಿಲುಕುವಂತಾಗಿದೆ’ ಎಂದು ರೈತರು ತಮ್ಮ ಅಳಲನ್ನು ವ್ಯಕ್ತಪಡಿಸಿದರು.

‘ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣವೇ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಸಮಗ್ರ ಪರಿಶೀಲನೆ ನಡೆಸಬೇಕು. ಅಕಾಲಿಕ ಮಳೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ವರದಿ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

ಭಾರತೀಯ ಕಿಸಾನ್ ಸಂಘದ ಹುಲಸೂರ–ಬಸವಕಲ್ಯಾಣ ತಾಲ್ಲೂಕ ಅಧ್ಯಕ್ಷ ಶರಣಪ್ಪ ವ್ಹಿ. ಧನ್ನಾ ಮಾತನಾಡಿ, ‘ರೈತರು ತಮ್ಮ ಸಂಕಷ್ಟವನ್ನು ತಿಳಿಸಲು ತಹಶೀಲ್ದಾರ್ ಕಚೇರಿಗೆ ಬಂದ ಸಂದರ್ಭದಲ್ಲೂ ಅಧಿಕಾರಿಗಳು ರೈತರಿಗೆ ಗೌರವ ತೋರದೆ ಕುಳಿತ ಸ್ಥಿತಿಯಲ್ಲೇ ಮನವಿ ಪತ್ರ ಸ್ವೀಕರಿಸಿರುವುದು ವಿಷಾದನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತೋಷ ಸೂರ್ಯವಂಶಿ, ಶಿವರಾಜ ತಾವೇ, ಅನೀಲಕುಮಾರ ತಾಂಬಳೆ, ಬಸವರಾಜ ಕಣಜೆ, ದೇವಿಂದ್ರ ಹಲಂಗೆ, ವೀರಶೇಟಿ ಮೂಲಗೆ, ಗುರುಲಿಂಗಪ್ಪ ಅಪಗುಂಡ್ಡೆ, ಚಂದ್ರಪ್ಪ ಪ್ರತಾಪೂರೆ, ನಾಗನಾಥ ಪೂಜಾರಿ, ಜೈಕುಮಾರ ಬಿರಾದಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-33-159893677

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.