ಹುಲಸೂರ: ಬೇಸಿಗೆಯ ತಾಪಮಾನ ಏರಿಕೆಯಿಂದ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿರುವ ನಡುವೆಯೇ, ಸಾರ್ವಜನಿಕರ ದೂರು ಸ್ವೀಕರಿಸಲು ಆರಂಭಿಸಲಾಗಿದೆ ಎಂದು ತಿಳಿಸಿರುವ ಕುಡಿಯುವ ನೀರಿನ ಸಹಾಯವಾಣಿ ಸಂಖ್ಯೆ ಕಾರ್ಯನಿರ್ವಹಿಸದೇ ಇರುವ ಸಂಗತಿ ಬೆಳಕಿಗೆ ಬಂದಿದೆ. ಇದರಿಂದ ಗ್ರಾಮೀಣ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ತಾಲ್ಲೂಕು ಪಂಚಾಯಿತಿ ಕಚೇರಿಯಿಂದ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು 9448196205 ಸಂಖ್ಯೆಯನ್ನು ಸಹಾಯವಾಣಿಯಾಗಿ ಪ್ರಕಟಿಸಲಾಗಿದೆ. ಆದರೆ ಈ ಸಂಖ್ಯೆಗೆ ಕರೆ ಮಾಡಿದಾಗ ಕೆಲವೊಮ್ಮೆ ‘ಸಂಪರ್ಕ ಸಾಧ್ಯವಿಲ್ಲ’ ಎಂದು, ಇನ್ನೂ ಕೆಲವು ವೇಳೆ ‘ಈ ಸಂಖ್ಯೆ ಅಸ್ತಿತ್ವದಲ್ಲಿಲ್ಲ’ ಎಂಬ ಸಂದೇಶ ಬರುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ‘ಸಹಾಯವಾಣಿ ಸಂಖ್ಯೆ ಕಾರ್ಯನಿರ್ವಹಿಸದಿರುವುದು ನನ್ನ ಗಮನಕ್ಕೆ ಬಂದಿದೆ. ಯಾವ ಸಂಖ್ಯೆ ಪ್ರಕಟಿಸಲಾಗಿದೆ ಎಂಬುದನ್ನು ತಕ್ಷಣ ಪರಿಶೀಲಿಸಿ, ಶೀಘ್ರದಲ್ಲೇ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಹೊಸ ಸಹಾಯವಾಣಿ ವ್ಯವಸ್ಥೆ ಆರಂಭಿಸಲಾಗುವುದು’ ಎಂದು ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಆಕಾಶ ಖಂಡಾಳೆ ಮಾತನಾಡಿ, ‘ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ನೀರಿನ ತೀವ್ರ ಸಮಸ್ಯೆ ಇದೆ. ಜನರು ದಿನನಿತ್ಯ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ಪ್ರಕಟಣೆಗಾಗಿ ಸಹಾಯವಾಣಿ ನೀಡುವುದರಿಂದ ಪ್ರಯೋಜನವಿಲ್ಲ. ತಕ್ಷಣ ಚಾಲ್ತಿಯಲ್ಲಿರುವ ಸರಿಯಾದ ಸಂಖ್ಯೆ ಪ್ರಕಟಿಸಿ, 24 ಗಂಟೆ ಸ್ಪಂದಿಸುವ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಕುಡಿಯುವ ನೀರು ಎಂಬುದು ಮೂಲಭೂತ ಹಕ್ಕು. ಅದಕ್ಕೆ ಸಂಬಂಧಿಸಿದ ಸಹಾಯವಾಣಿ ವ್ಯವಸ್ಥೆಯೇ ಅಸ್ತಿತ್ವದಲ್ಲಿಲ್ಲದಿರುವುದು ಆಡಳಿತ ಯಂತ್ರದ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣರಿಗೆ ನೆರವಾಗಬೇಕಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-1344945397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.