ಹುಲಸೂರ: ‘ನಾಡಿನಾದ್ಯಂತ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆಮೂಲೆಗೂ ತಲುಪಿಸುವ ಮಹತ್ವದ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ’ ಎಂದು ಸಾಹಿತಿ ರಾಜಕುಮಾರ ಮೇಕರೆ ಹೇಳಿದರು.

ತಾಲ್ಲೂಕಿನ ಬೇಲೂರು ಗ್ರಾಮದ ಜ್ಞಾನಗಂಗಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮೈಸೂರು ಒಡೆಯರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರೇರಣೆಯಿಂದ 1915ರ ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು. ಕನ್ನಡ ಪುಸ್ತಕಗಳ ಪ್ರಕಟಣೆ, ನಾಡು–ನುಡಿಯ ಸಂರಕ್ಷಣೆ ಹಾಗೂ ಕನ್ನಡಕ್ಕೆ ಸಮಸ್ಯೆ ಎದುರಾದಾಗ ಕನ್ನಡಿಗರ ಧ್ವನಿಯಾಗಿ ಪರಿಷತ್ತು ಸದಾ ಕಾರ್ಯನಿರ್ವಹಿಸುತ್ತಿದೆ’ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಜಗನ್ನಾಥ ಢಗೆ ಅವರು ಕನ್ನಡ ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಾನೊಬ್ಬ ಕನ್ನಡಿಗ ಎಂಬ ಹೆಮ್ಮೆ ಪ್ರತಿಯೊಬ್ಬರಲ್ಲೂ ಇರಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹಾವಣ್ಣಾ ಮಾತನಾಡಿ, ‘ಕನ್ನಡವೆಂದರೆ ಕೇವಲ ಭಾಷೆಯಲ್ಲ, ಅದು ನಮ್ಮ ಉಸಿರು. ಆ ಉಸಿರನ್ನು ಕಾಪಾಡುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಶತಮಾನಕ್ಕೂ ಅಧಿಕ ಕಾಲದಿಂದ ನಿರಂತರವಾಗಿ ಮಾಡುತ್ತಿದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ ಬೇಲೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಶಿಲ್ಪಾ ನಾಗನಾಥ ಹಾಗೂ ಸುಪ್ರೀಯಾ ವಿಠ್ಠಲ ಅವರನ್ನು ಸನ್ಮಾನಿಸಲಾಯಿತು. ಜ್ಞಾನಗಂಗಾ ತರಬೇತಿ ಕೇಂದ್ರದ ಸಂಸ್ಥಾಪಕ ಪರಮೇಶ್ವರ ಅಂತಪ್ಪ, ಶಿಕ್ಷಕರಾದ ಓಂಕಾರ ಮೂಲಗೆ, ಆನಂದ ಬಿದ್ಮಾನೆ ಹಾಗೂ ಮಲ್ಲಮ್ಮ ಹಲಿಂಗೆ ಅವರನ್ನೂ ಗೌರವಿಸಲಾಯಿತು.

ಪರಿಷತ್ತಿನ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ರಾಜಶೇಖರ ಪಾಟೀಲ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಭೀಮಾಶಂಕರ ಆದೇಪ್ಪಾ, ಪರಿಷತ್ತಿನ ಗೌರವ ಸಲಹೆಗಾರ ರೇವಣಸಿದ್ಧ ಪಾಟೀಲ, ಮಲ್ಲಿಕಾರ್ಜುನ ಹಲಿಂಗೆ, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಲ್ಲಮ್ಮ ಹಲಿಂಗೆ ಪ್ರಾರ್ಥನಾ ಗೀತೆ ಹಾಡಿದರು. ಓಂಕಾರ ಮೂಲಗೆ ಕಾರ್ಯಕ್ರಮ ನಿರೂಪಿಸಿದರು. ಆನಂದ ಬಿದ್ಮಾನೆ ಸ್ವಾಗತಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-2071707747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.