ಹುಲಸೂರ: ‘ಮುಂಗಾರು ಕೊರತೆಯಿಂದಾದ ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ತೊಗರಿ ಸೇರಿದಂತೆ ವಾರ್ಷಿಕ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದರೂ, ಸರ್ಕಾರ ಇದುವರೆಗೂ ರೈತರಿಗೆ ಪರಿಹಾರ ಮಂಜೂರು ಮಾಡಿಲ್ಲ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ದೂರಿದರು.

ತಾಲ್ಲೂಕಿನ ಸೋಲದಾಪಕ ಹಾಗೂ ಬೇಲೂರ ಗ್ರಾಮಗಳ ವಿವಿಧ ರೈತರ ಹೊಲಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವ ದೊಂದಿಗೆ ಬಿಜೆಪಿ ನಾಯಕರು ಮಳೆಯಿಂದ ಹಾನಿಗೆ ಒಳಗಾದ ಸೋಯಾ ಅವರೆ, ತೊಗರಿ ಬೆಳೆಗಳನ್ನು ಶನಿವಾರ ವೀಕ್ಷಿಸಿ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈತರಿಂದ ಮಾಹಿತಿ ಪಡೆದು ಮಾತನಾಡಿದರು.

‘ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಬೆಳೆ ವಿಮೆ ಮತ್ತು ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳು ಸೇರಿದಂತೆ ಇತರೆ ಬ್ಯಾಂಕ್ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

‘ಶೀಘ್ರ ಕಾಂಗ್ರೆಸ್ ಸರ್ಕಾರ ಪ್ರತಿ ಎಕರೆಗೆ ₹25 ಸಾವಿರದಂತೆ ಪರಿಹಾರ ಘೋಷಿಸಬೇಕು. ಅತಿವೃಷ್ಟಿಯಿಂದಾಗಿ ಜೀವನೋಪಾಯಕ್ಕಾಗಿ ಜನರು ವಲಸೆ ಹೋಗುವುದನ್ನು ತಡೆಯಲು ಗ್ರಾಮಗಳಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಯೋಜನೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಶಾಸಕ ಶರಣು ಸಲಗರ ಮಾತನಾಡಿ, ‘ಮಂತ್ರಿಗಳು ಬರೀ ವೈಮಾನಿಕ ಸಮೀಕ್ಷೆ ನಡೆಸಿದರೆ ರೈತರ ಕಷ್ಟ ಅರಿವಾಗುವುದಿಲ್ಲ. ಜಮೀನುಗಳಿಗೆ ಭೇಟಿ ನೀಡಬೇಕು. ಅಂದಾಗ ಮಾತ್ರ ವಾಸ್ತವ ಸ್ಥಿತಿ ಗೊತ್ತಾಗುತ್ತದೆ. ಸರ್ಕಾರ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದರೆ ಬಾರಕೋಲಿನಿಂದ ಚಾಟಿ ಬೀಸಿ ಹೋರಾಟ ರೂಪಿಸುವ ಯೋಜನೆಯಿದೆ. ರೈತರ ಸಾಲಮನ್ನಾಕ್ಕಾಗಿ ಆಗ್ರಹಿಸಿ ಅ.17ರಂದು ಬಿಜೆಪಿ ವತಿಯಿಂದ ಬಸವಕಲ್ಯಾಣದಲ್ಲಿ 10 ಸಾವಿರ ರೈತರನ್ನು ಸೇರಿಸಿ, ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

ವಿಧಾನ ಪರಿಷತ್ ಮಾಜೀ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ, ಶಾಸಕರಾದ ಪ್ರಭು ಚೌಹಾಣ್, ಡಾ.ಸಿದ್ದು ಪಾಟೀಲ, ಈಶ್ವರ್ ಸಿಂಗ ಠಾಕೂರ, ಸೂರ್ಯಕಾಂತ ಚೆಲ್ಲಾಬಟ್ಟೆ, ರೂಪವತಿ ಜಾಧವ ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.