ಹುಲಸೂರ: ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಿರ್ಮಿಸಿದ್ದ ಸೌರ ಹೈಮಾಸ್ಟ್ ಕಂಬ ನೆಲಕ್ಕುರುಳಿದೆ.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ಅಂದಾಜು ₹29.09 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಹೈಮಾಸ್ಟ್ ಕಂಬ ಬಿರುಗಾಳಿ ಮಳೆಗೆ ನೆಲಕ್ಕುರುಳಿದ್ದು, ವಿದ್ಯುತ್ ತಂತಿಯ ಮೇಲೆಯೇ ಬಿದ್ದಿದೆ. ಜನ ಸಂಚಾರ ಕಡಿಮೆ ಇರುವ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.

ಇನ್ನು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಿರ್ಮಿಸಲಾದ ಸೌರ ಹೈಮಾಸ್ಟ್ ಕಂಬವೂ ಕೂಡ ಅದೇ ರೀತಿಯಲ್ಲಿ ಕುಸಿದಿರುವುದು ಬೆಳಕಿಗೆ ಬಂದಿದೆ. ಶಾಲೆ ರಜೆ ಇರುವುದರಿಂದ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿರಲಿಲ್ಲ.

ಆಸ್ಪತ್ರೆ ಆವರಣದಲ್ಲಿನ ಕಂಬ ಬಿದ್ದ ಪರಿಣಾಮ ದುರ್ಗಾ ನಗರ ಹಾಗೂ ಶಿವಾಜಿ ವೃತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಬಾಣಂತಿಯರು ಹಾಗೂ ಹೆರಿಗೆ ರೋಗಿಗಳು ಕುಡಿಯುವ ನೀರಿನ ಸಮಸ್ಯೆ ಉಂಟಾಯಿತು.

ಜೆಸ್ಕಾಂ ಉಪವಿಭಾಗ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ದುರಸ್ತಿ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದಾಗ ಸಮರ್ಪಕ ಸ್ಪಂದನೆ ದೊರಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಗಾಳಿ–ಮಳೆಯ ನಡುವೆ ಹೈಮಾಸ್ಟ್ ಕಂಬಗಳು ಕುಸಿದಿರುವುದು ಕಾಮಗಾರಿಗಳ ಗುಣಮಟ್ಟ ಮತ್ತು ತಾಂತ್ರಿಕ ಅಂಶಗಳ ಬಗ್ಗೆ ಸಾರ್ವಜನಿಕರಿಂದ ಅನುಮಾನ ವ್ಯಕ್ತವಾಗುತ್ತಿದೆ.

ಘಟನೆ ಬಳಿಕ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿಗೊಳಗಾದ ಕಂಬಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭಗೊಂಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-33-1359092494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.